ನವದೆಹಲಿ:ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್​ಇಪಿ) ಅನುಷ್ಠಾನದ ಕುರಿತು ಶಾಲಾ-ಕಾಲೇಜುಗಳ ಶಿಕ್ಷಕರಿಂದ ಶಿಕ್ಷಣ ಸಚಿವಾಲಯ ಸಲಹೆ ಆಹ್ವಾನಿಸಿದೆ. ಎನ್​ಇಪಿ 2020 ಜಾರಿಯಲ್ಲಿ ಶಿಕ್ಷಕರು ಮುಖ್ಯ ಪಾತ್ರ ನಿರ್ವಹಿಸುತ್ತಾರೆನ್ನುವುದು ನಮ್ಮ ಅಭಿಪ್ರಾಯ. ಆದ್ದರಿಂದ ಜಾರಿ ಪ್ರಕ್ರಿಯೆಯನ್ನು ಮುಂದಕ್ಕೊಯ್ಯುವ ಕುರಿತು ದೇಶದಾದ್ಯಂತದ ಶಿಕ್ಷಕರು ಮತ್ತು ಪ್ರಿನ್ಸಿಪಾಲರಿಂದ ಸಲಹೆಗಳನ್ನು ಆಹ್ವಾನಿಸಲಾಗಿದೆ ಎಂದು ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮಾಡಿದ್ದಾರೆ.
ಪ್ರಶ್ನಾವಳಿ ಮಾದರಿ:ಸಲಹೆ ಸಲ್ಲಿಕೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಪ್ರತಿಯೊಂದು ವಿಷಯಕ್ಕೆ ಸಂಬಂಧಿಸಿ ಪ್ರಶ್ನಾವಳಿ ರೂಪಿಸಲಾಗಿದೆ. ಶಿಕ್ಷಕರು ತಮ್ಮ ಅನುಭವದ ಆಧಾರದಲ್ಲೇ ಉತ್ತರ ನೀಡಬಹುದಾದ ರೀತಿಯಲ್ಲಿ ಅದನ್ನು ರೂಪಿಸಿರುವುದಾಗಿ ಶಾಲಾ ಶಿಕ್ಷಣ ಕಾರ್ಯದರ್ಶಿ ಅನಿತಾ ಕರ್ವಾಲ್ ಹೇಳಿದ್ದಾರೆ. ಶಿಕ್ಷಣ ಸಚಿವಾಲಯ ವೆಬ್​ಸೈಟ್​ನಲ್ಲಿ ಸಲಹೆಗೆಂದೇ ಇರುವ ಲಿಂಕ್​ಗೆ ಆಗಸ್ಟ್ 24ರಿಂದ 31ರವರೆಗೆ ಸಲಹೆಗಳನ್ನು ಅಪ್​ಲೋಡ್ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಗಣೇಶ ಹಬ್ಬದಂದು ಬಿಡುಗಡೆಯಾಯ್ತು ನಿತ್ಯಾನಂದನ ಕೈಲಾಸದ ಕರೆನ್ಸಿ; ಭಾರತೀಯ ರೂಪಾಯಿಗೆಷ್ಟು ಮೌಲ್ಯ ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + nineteen =
Remember me
