ಇಂದೋರ್​:ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಮಾತನ್ನು ನಮ್ಮ ಹಿರಿಯರು ಸುಮ್ಮನೇ ಹೇಳಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಪತಿ-ಪತ್ನಿ ನಡುವೆ ಕ್ಷುಲಕ ಕಾರಣಕ್ಕೆ ಜಗಳಗಳಾಗುತ್ತಿದ್ದು, ಪರಿಸ್ಥಿತಿ ವಿಕೋಪಕ್ಕೆ ಕೆಲವೊಮ್ಮೆ ಕೊಲೆ-ಆತ್ಮಹತ್ಯೆ ಮಾಡಿಕೊಂಡಿರುವಂತಹ ಹಲವಾರ ನಿದರ್ಶನಗಳು ನಮ್ಮ ಕಣ್ಣ ಮುಂದಿವೆ. ಇದೀಗ ಮಹಿಳೆಯೊಬ್ಬರು ಪತಿಯ ಜೊತೆ ಜಗಳವಾಡಿ ಮೂರನೇ ಮಹಡಿಯಿಂದ ಜಿಗಿದು ಪ್ರಾಣ ಬಿಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ.
ಇಂದೋರ್​ನ ಲಸುದಿಯಾ ಪೊಲೀಸ್​ ಠಾಣಾ ವ್ಯಾಪ್ತಿಗೆ ಬರುವ ಸಿಂಗಾಪುರ್​ ಟೌನ್​​ಶಿಪ್​ನಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರೊಬ್ಬರು ತಮ್ಮ ಮೊಬೈಲ್​ನಲ್ಲಿ ಮಹಿಳೆ ಕಟ್ಟಡದಿಂದ ಜಿಗಿಯುತ್ತಿರುವುದನ್ನು ಸೆರೆ ಹಿಡಿದಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.
A heartbreaking incident has come to light in Indore's Green Pre-View EWS Quarters, where a woman committed suicide by jumping from the third floor after a dispute with her husband.#Indore#MadhyaPradesh#Viral#Viralvideo#Indiapic.twitter.com/a32hiLoaYR
ಇದನ್ನೂ ಓದಿ:ಗೌರವ ಡಾಕ್ಟರೇಟ್​ ಪದವಿಯನ್ನು ತಿರಸ್ಕರಿಸಿದ ನಟ ಕಿಚ್ಚ ಸುದೀಪ್​; ಕೊಟ್ಟ ಕಾರಣ ಹೀಗಿದೆ
ಈ ಕುರಿತು ಮಾತನಾಡಿರುವ ಹೆಚ್ಚುವರಿ ಪೊಲೀಸ್​ ಉಪ ಆಯುಕ್ತ ಅಮರೇಂದ್ರ ಸಿಂಗ್, ಮೃತರನ್ನು ಅಂಗೂರಿ ಎಂದು ಗುರುತಿಸಲಾಗಿದ್ದು, ಇವರ ಪತಿ ರಾಹುಲ್​ ಜೊತೆ ಆಗಸ್ಟ್​ 04ರಂದು ಜಗಳವಾಗಿದೆ. ಜಗಳದ ವೇಳೆ ಪತಿ ಬೈದಿದ್ದಕ್ಕೆ ಕೋಪಗೊಂಡು ತಾವು ವಾಸವಿದ್ದ ಕಟ್ಟಡದ ಮೂರನೇ ಮಹಡಿಗೆ ತೆರಳಿದ್ದಾರೆ. ಈ ವಿಚಾರವನ್ನು ತಿಳಿದ ಪತಿ ಕೂಡಲೇ ಸ್ಥಳಕ್ಕೆ ತೆರಳಿದ್ದು, ಪತ್ನಿಯ ಮನವೊಲಿಸಲು ಮುಂದಾಗಿದ್ದಾರೆ. ಪತಿ ಹತ್ತಿರ ಬರುತ್ತಿದ್ದಂತೆ ಮಹಿಳೆ ಕಟ್ಟಡದಿಂದ ಜಿಗಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ತನಿಖೆಗೆ ಆದೇಶಿಸಲಾಗಿದ್ದು, ಪತಿ-ಪತ್ನಿಯ ನಡುವೆ ಇದ್ದ ಮನಸ್ತಾಪ, ಯಾವ ಕಾರಣಕ್ಕೆ ಮಹಿಳೆ ಇಂತಹ ನಿರ್ಧಾರ ತಗೆದುಕೊಂಡರು ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದ್ದು, ಮಹಿಳೆಯ ಪತಿ ಹಾಗೂ ನೆರೆಹೊರೆಯವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್​ ಉಪ ಆಯುಕ್ತ ಅಮರೇಂದ್ರ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:8 + nineteen =
Remember me
