ನವದೆಹಲಿ:2020-21ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಶುಕ್ರವಾರ ಸಮನ್ಸ್​ ಜಾರಿ ಮಾಡಿತ್ತು.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಅರವೀಂದ್​ ಕೇಜ್ರಿವಾಲ್ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿರುವ​ ಸರ್ಕಾರಿ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದ್ಧಾರೆ.
ಸಿಬಿಐ ಹಾಗೂ ಇಡಿ ವಶದಲ್ಲಿರುವ ನಮ್ಮ ನಾಯಕರಿಗೆ ಚಿತ್ರ ಹಿಂಸೆ ನೀಡಲಾಗುತ್ತಿದೆ. ಅಕ್ರಮಕ್ಕೆ ಸಂಬಂಧಿಸಿದಂತೆ ಪುರಾವೆಗಳು ಸಿಗದ ಕಾರಣ ನ್ಯಾಯಾಲಯದಲ್ಲಿ ಸುಳ್ಳು ಸಾಕ್ಷಿ ಹೇಳುವಂತೆ ಮಾಡಲಾಗುತ್ತಿದೆ ಎಂದು ಕೇಜ್ರಿವಾಲ್​ ಆರೋಪಿಸಿದ್ದಾರೆ.
ಸರ್ಕಾರಿ ತನಿಖಾ ಸಂಸ್ಥೆಗಳಾದ ಸಿಬಿಐ ಹಾಗೂ ಇಡಿ ಮೂಲಕ ಕೇಂದ್ರ ಬಿಜೆಪಿ ಸರ್ಕಾರವು ವಿರೋಧ ಪಕ್ಷದವರನ್ನು ಮುಗಿಸಲು ಹೊರಟಿದೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ಧಾರೆ.
We will file appropriate cases against CBI and ED officials for perjury and producing false evidence in courts
ಇದನ್ನೂಓದಿ:ಅಬಕಾರಿ ನೀತಿಯಲ್ಲಿ ಅಕ್ರಮ; ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ಗೆ ಸಿಬಿಐ ಸಮನ್ಸ್​
ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಇಲ್ಲಿಯವರೆಗೆ 14 ಪೋನುಗಳನ್ನು ನಾಶಪಡಿಸಲಾಗಿದೆ ಎಂದು ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಡೆವಿಟ್​ನಲ್ಲಿ ತಿಳಿಸಿವೆ. ಆದರೆ, ಅಲ್ಲಿ ಅದ್ಯಾವುದು ನಡೆದಿಲ್ಲ ಮತ್ತು ಬಂಧಿತರನ್ನು ಬೆದರಿಸಿ ಸುಳ್ಳು ಸಾಕ್ಷಿ ಹೇಳುವಂತೆ ಮಾಡಲಾಗುತ್ತಿದೆ.
ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಅವರ ಬಂಧನದ ನಂತರ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಒಂದು ನಯಾ ಪೈಸೆಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ ಎಂದು ಕೇಜ್ರಿವಾಲ್​ ಆರೋಪಿಸಿದ್ದಾರೆ.
ನಮ್ಮ ಪಕ್ಷದ ನಾಯಕರ ಮನೆ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಅವರ ಮನೆಯಲ್ಲಿ ಏನು ದೊರೆಯದಿದ್ದಾಗ ಹಣವನ್ನು ಗೋವಾ ಹಾಗು ಪಂಜಾಬ್​ನಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ನಾವು ಆ ಹಣವನ್ನು ಬಳಸಿರುವ ಬಗ್ಗೆ ಪುರಾವೆಗಳು ಎಲ್ಲಿವೆ ನಾವು ಪ್ರತಿಯೊಂದಕ್ಕೂ ಚೆಕ್​ ಮೂಲಕ ಪಾವತಿ ಮಾಡಿದ್ದೇವೆ. ನಿಮಗೆ ಸಿಕ್ಕಿರುವ 100 ಕೋಟಿ ರೂಪಾಯಿ ಅಲ್ಲಿ ಒಂದು ರೂಪಾಯಿಯನ್ನು ನನಗೆ ತೋರಿಸಿ ಎಂದು ಸವಾಲ್​ ಎಸೆದಿದ್ದಾರೆ.
ನಾನು ಸೆಪ್ಟೆಂಬರ್​ 17ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ 1,000 ಕೋಟಿ ರೂಪಾಯಿ ನೀಡಿದ್ದೇನೆ ಎಂದು ಹೇಳಿದ ತಕ್ಷಣ ನೀವು ಅವರನ್ನು ಬಂಧಿಸುತ್ತೀರಾ. ಸರ್ಕಾರಿ ತನಿಖಾ ಸಂಸ್ಥೆಗಳ ವಿರುದ್ಧ ನ್ಯಾಯಾಲಯದಲ್ಲಿ ದಾವೆ ಹೂಡುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 5 =
Remember me
