ನವದೆಹಲಿ:ನಮ್ಮ ದೇಶದ ಹೆಸರನ್ನು ಇಂಡಿಯಾದ ಬದಲು ಭಾರತ ಅಥವಾ ಹಿಂದೂಸ್ಥಾನ ಮಾಡುವ ಸಂಬಂಧ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಮುಂದೂಡಿದೆ.
ಭಾರತೀಯ ಸಂವಿಧಾನಕ್ಕೆ ತಿದ್ದುಪಡಿ ತರುವ ಮೂಲಕ ‘ಇಂಡಿಯಾ” ಎಂಬ ಹೆಸರನ್ನು “ಭಾರತ” ಅಥವಾ “ಹಿಂದೂಸ್ಥಾನ” ಎಂದು ಬದಲಾಯಿಸುವಂತೆ ಕೋರಿ ದೆಹಲಿಯ ನಮಃ ಎಂಬುವವರು ಸಲ್ಲಿಸಿರುವ ಅರ್ಜಿ ಇದಾಗಿದೆ. ಸುಪ್ರೀಂಕೋರ್ಟ್​ ಯಾವುದೇ ದಿನಾಂಕವನ್ನು ನೀಡದೆ ವಿಚಾರಣೆಯನ್ನು ಮುಂದೂಡಿದೆ.
ಇದನ್ನೂ ಓದಿ:‘ಈ ಸ್ಯಾನಿಟೈಸರ್​ ಹಚ್ಚಿ, ಕರೊನಾ ತೊಲಗಿಸಿ’ ಎಂದ ಕಂಪನಿಗೆ ಹೈಕೋರ್ಟ್​ನಿಂದ ಒಂದು ಲಕ್ಷ ರೂ. ದಂಡ
ಮುಘಲ್​ ದೊರೆಗಳ ಆಡಳಿತದಲ್ಲಿ ಹಿಂದೂಸ್ಥಾನವಾಗಿದ್ದ ನಮ್ಮ ದೇಶವು, ಬ್ರಿಟಿಷರ ಆಳ್ವಿಕೆಯ ಕಾಲದಲ್ಲಿ “ಇಂಡಿಯಾ” ಆಗಿ ಬದಲಾಗಿದೆ. ಆದರೆ ಬ್ರಿಟಿಷರ ಹೆಸರು ನಮಗೆ ಬೇಡ. ನಮ್ಮ ದೇಶ ಒಂದೋ ಭಾರತವಾಗಲೀ ಇಲ್ಲವೇ ಹಿಂದೂಸ್ಥಾನವಾಗಲಿ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಸಂವಿಧಾನದ 1 ನೇ ಪರಿಚ್ಛೇದವು “ಒಕ್ಕೂಟದ ಹೆಸರು ಮತ್ತು ಭೂಪ್ರದೇಶದೊಂದಿಗೆ ವ್ಯವಹಾರ” ಇದರ ಬಗ್ಗೆ ಉಲ್ಲೇಖಿಸಿದೆ. ಇದರಲ್ಲಿಯೇ ತಿದ್ದುಪಡಿ ತರುವ ಮೂಲಕ ನಮ್ಮ ದೇಶವನ್ನು “ಇಂಡಿಯಾ”ಮುಕ್ತ ಗೊಳಿಸುವಂತೆ ಅರ್ಜಿದಾರರು ಕೋರಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ:ಕರೊನಾ ಹಿನ್ನೆಲೆ: ಚಟ್ಟ ಕಟ್ಟಲೂ ಬಂತು ಆನ್​ಲೈನ್​ ಸೇವೆ, ಕುಳಿತಲ್ಲೇ ಎಲ್ಲ ಲಭ್ಯ
“ಇಂಡಿಯಾ” ಎನ್ನುವುದು ಇಂಗ್ಲಿಷ್​ ಪದ. ಇದನ್ನು ತೆಗೆದು ಹಾಕಿ ಹಿಂದೂಸ್ಥಾನ ಅಥವಾ ಭಾರತ ಎಂದು ಮಾಡಿದರೆ ಎಲ್ಲರಲ್ಲಿಯೂ ರಾಷ್ಟ್ರೀಯತೆ ಭಾವ ಮೂಡುತ್ತದೆ. ಹೆಸರು ತೆಗೆಯುವುದು ಸಾಂಕೇತಿಕ ಎಂದು ಎನಿಸಿದರೂ ಹೆಸರು ಬದಲಾವಣೆಯಿಂದ ನಮ್ಮತನದ ಭಾವನೆ ಮೂಡುವ ಕಾರಣ ಇಂಗ್ಲಿಷರ ಶಬ್ದ ನಮಗೆ ಬೇಡ. ನಮ್ಮ ಪೂರ್ವಜರು ಸ್ವಾತಂತ್ರ್ಯ ತರಿಸಿಕೊಡಲು ಸಾಕಷ್ಟು ಹೋರಾಟ ನಡೆಸಿದ್ದಾರೆ. ಆದ್ದರಿಂದ ಇಂಗ್ಲಿಷರು ಆಳ್ವಿಕೆಯ ಹೆಸರನ್ನು ತೆಗೆದುಹಾಕಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.
ರೋಗಿಯ ಅಂತ್ಯಕ್ರಿಯೆಯ ಏಳನೇ ದಿನಕ್ಕೆ ಬಂತೊಂದು ಮೆಸೇಜ್​: ಇಡೀ ಕುಟುಂಬವೇ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 17 =
Remember me
