ನವದೆಹಲಿ:ಭಾರತೀಯ ಸೇನೆಯಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸುವ ಹಾಗೂ ಪುರುಷರಿಗೆ ಸರಿಸಮನಾಗಿ ಸ್ಥಾನಮಾನ ನೀಡುವ ಕುರಿತು ಹೊರಡಿಸಿದ್ದ ಆದೇಶ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಮತ್ತೆ ಒಂದು ತಿಂಗಳು ಕಾಲಾವಕಾಶವನ್ನು ಸುಪ್ರೀಂಕೋರ್ಟ್ ನೀಡಿದೆ.
ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಜಾರಿಗೆ ಇನ್ನೂ 6 ತಿಂಗಳು ಕಾಲಾವಕಾಶ ನೀಡುವಂತೆ ಕೋರಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ, ಫೆ.17ರಂದು ನೀಡಿದ್ದ ಆದೇಶವನ್ನು ಯಥಾವತ್ತಾಗಿ ಜಾರಿಗೆ ತರಬೇಕೆಂದು ಆದೇಶ ನೀಡಿದೆ.
ಇದನ್ನೂ ಓದಿ:ಕೋವಿಡ್​ 19 ಚಿಕಿತ್ಸೆಯಲ್ಲಿ ಸಿದ್ಧ ಔಷಧದ ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಿ- ಕೇಂದ್ರಕ್ಕೆ ಕೋರ್ಟ್​ ನಿರ್ದೇಶನ
ಸುಪ್ರೀಂಕೋರ್ಟ್ ನೀಡಿದ್ದ ಆದೇಶ:ಫೆ.17ರಂದು ಮಹತ್ವದ ಆದೇಶ ಹೊರಡಿಸಿದ್ದ ಸವೋಚ್ಚ ನ್ಯಾಯಾಲಯ ಭಾರತೀಯ ಸೇನೆಯಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಶಾಶ್ವತ ಆಯೋಗ ಸ್ಥಾಪಿಸುವ ಜತೆಗೆ ಲಿಂಗ ತಾರತಮ್ಯ ತೋರದೆ ಪುರುಷ ಅಧಿಕಾರಿಗಳಿಗೆ ಸರಿಸಮನಾದ ಕಮಾಂಡ್ ಹುದ್ದೆ ನೀಡಬೇಕು. 14 ವರ್ಷ ಅಥವಾ 20 ವರ್ಷ ಸೇವೆ ಮುಗಿಸಿದ್ದಾರೆ ಎಂಬ ಯಾವ ಮಾನದಂಡ ಲೆಕ್ಕಿಸದೆ, ಅಲ್ಪಾವಧಿ ಸೇವೆಯಲ್ಲಿರುವ ಎಲ್ಲ ಅಧಿಕಾರಿಗಳನ್ನು ಕಾಯಂ ಸೇವೆಗೆ ಪರಿಗಣಿಸುವ ಪ್ರಕ್ರಿಯೆಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ನ್ಯಾಯಾಲಯ ಸೂಚಿಸಿತ್ತು.
ಕೇಂದ್ರದ ವಾದವೇನು?:ಮಹಿಳೆಯರಿಗೆ ದೈಹಿಕವಾಗಿ ಮಿತಿಗಳಿರುತ್ತದೆ. ಸೇನಾ ಪ್ರಾತಿನಿಧ್ಯ ನೀಡುವಾಗ ಈ ಅಂಶವನ್ನು ಸರ್ಕಾರ ಪರಿಗಣಿಸಲೇಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ವಾದಿಸಿತ್ತು. ಇದನ್ನು ನಿರಾಕರಿಸಿದ ಸುಪ್ರೀಂಕೋರ್ಟ್, ಇದು ಮಹಿಳೆಯರ ವಿರುದ್ಧದ ಲೈಂಗಿಕ ತಾರತಮ್ಯ ಮನಸ್ಥಿತಿಯ ಚೀಂತನೆ ಎನ್ನುವ ಮೂಲಕ ಕೇಂದ್ರದ ವಾದವನ್ನು ನ್ಯಾಯಾಲಯ ತಳ್ಳಿಹಾಕಿತ್ತು.
ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಚೀನಾ ಮತ್ತು ಪಾಕ್ ವಿರುದ್ಧ ಭಾರಿ ಪ್ರತಿಭಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + six =
Remember me
