ನವದೆಹಲಿ:ಯಾವುದೆ ತರಹದ ಅರ್ಜಿ, ಗುರುತಿನ ಚೀಟಿ ಇಲ್ಲದೆಯೇ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ RBI ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್​ ನಿರಾಕರಿಸಿದೆ.
ಭಾರತೀಯ ರಿಸರ್ವ್​ ಬ್ಯಾಂಕ್(RBI) ಹಾಗೂ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ(SBI)​ ಹೊರಡಿಸಿದ ಅಧಿಸೂಚನೆಗಳನ್ನು ಪ್ರಶ್ನಿಸಿ ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ತಕ್ಷಣವೇ ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿ ಕೋರ್ಟ್​ ಅರ್ಜಿಯನ್ನು ತಳ್ಳಿಹಾಕಿದೆ.
ಇದನ್ನೂ ಓದಿ:ಕಾಂಗ್ರೆಸ್​ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಪಜ್ಞಾನಿಗಳು‌, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಹರಿಪ್ರಸಾದ್​ ಹೇಳಿಕೆಗೆ ರಾಜ್ಯ ಬಿಜೆಪಿ ಟಾಂಗ್​
ವಕೀಲ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನಿರುದ್ಧ್​ ಬೋಸ್​ ಹಾಗೂ ರಾಜೇಶ್​ ಬಿಂದಲ್​ ಅವರಿದ್ದ ದ್ವಿಸದಸ್ಯ ಪೀಠವು ಬೇಸಿಗೆ ರಜೆ ಮುಗಿದ ನಂತರ ಈ ವಿಚಾರವನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್​ ಅವರಲ್ಲಿ ಮಂಡಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿತ್ತು.
ಇದಕ್ಕೂ ಮುನ್ನ ಮಾತನಾಡಿದ ವಕೀಲ ಅಶ್ವಿನಿ ಕಳೆದ 10 ದಿನಗಳಲ್ಲಿ 1.8 ಲಕ್ಷ ಕೋಟಿ ರೂ. ಮೌಲ್ಯದ 2,000 ₹ ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡಲಾಗಿದೆ. ರಜೆಯ ನಂತರ ಅರ್ಜಿ ವಿಚಾರಣೆ ನಡೆಸಿದರೆ ಫಲಪ್ರದವಾಗಿರುವುದಿಲ್ಲ. ಬದಲಾವಣೆಯಾಗಿರುವ ಎಲ್ಲಾ ನೋಟುಗಳು ಕಪ್ಪುಹಣವಾಗಿದ್ದು ಜುಲೈ ವೇಳೆ ಸಂಪೂರ್ಣವಾಗಿ ವಿನಿಮಯವಾಗಿರಲಿದೆ ಎಂದು ನ್ಯಾಯಪೀಠದ ಗಮನ ಸೆಳೆದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 2 =
Remember me
