ನವದೆಹಲಿ:ದೇಶದಲ್ಲಿ ಬಿಗಡಾಯಿಸಿರುವ ವೈದ್ಯಕೀಯ ಆಮ್ಲಜನಕ ಸಮಸ್ಯೆ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಆಮ್ಲಜನಕದ ಲಭ್ಯತೆ, ಪೂರೈಕೆ ಹಾಗೂ ಬೇಡಿಕೆ ಕುರಿತಂತೆ ಪರಾಮರ್ಶಿಸಿ ಸಲಹೆ ಸೂಚನೆಗಳನ್ನು ಕೊಡುವುದಕ್ಕೆ 12 ಜನರನ್ನೊಳಗೊಂಡ ಟಾಸ್ಕ್​ಫೋರ್ಸ್​​ ರಚಿಸಿ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಢ ಹಾಗೂ ಎಂಆರ್​ ಶಾ ಅವರನ್ನೊಳಗೊಂಡ ಪೀಠ ಈ ಆದೇಶ ಮಾಡಿದೆ.
ಟಾಸ್ಕ್​ಫೋರ್ಸ್​​ ವೈದ್ಯಕೀಯ ಆಮ್ಲಜನಕ ಪೂರೈಕೆ ಕುರಿತಂತೆ ವೈಜ್ಞಾನಿಕ ತಳಹದಿ ಮೇಲೆ ಕೆಲಸ ಮಾಡಬೇಕು ಎಂದು ಸೂಚಿಸಿದೆ. ಬಾಬುತೋಷ್ ಬಿಸ್ವಾಸ್, ನರೇಶ್ ಟೆಹರನ್, ಕೇಂದ್ರ ಸರ್ಕಾರದ ಇಬ್ಬರು ಹಾಗೂ ಕೇಂದ್ರ ಸಚಿವ ಸಂಪುಟದ ಕಾರ್ಯದರ್ಶಿ ಇದರ ಸದಸ್ಯರಾಗಿರುತ್ತಾರೆ ಎಂದು ಕೋರ್ಟ್​ ಹೇಳಿದೆ.
ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆಯಿಂದ ಕೋವಿಡ್ ಸೋಂಕಿಗೆ ಒಳಗಾಗಿರುವ ನೂರಾರು ಮಂದಿ ಪ್ರಾಣ ಬಿಡುತ್ತಿದ್ದಾರೆ. ಈ ಗಂಭೀರ ಸಮಸ್ಯೆ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿತ್ತು.
ರಾಜ್ಯಕ್ಕೆ ಆಕ್ಸಿಜನ್‌ ಪೂರೈಕೆಗೆ ಮೀನಮೀಷ: ಕೇಂದ್ರದ ವಿರುದ್ಧ ಸುಪ್ರೀಂ ಗರಂ- ಕೂಡಲೇ ಬಿಡುಗಡೆಗೆ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − 1 =
Remember me
