ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಎಪಿ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್​ ಸಿಂಗ್​ಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ. ವರಾಳೆ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಜಾಮೀನು ಮಂಜೂರು ಮಾಡಿದೆ.
ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 04ರಂದು ಸಂಜಯ್​​ ಸಿಂಗ್​ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಸತತ ವಿಚಾರಣೆಯ ಬಳಿಕ ಸಂಜಯ್​ ಸಿಂಗ್​ಗೆ ಬೇಲ್​ ಮಂಜೂರು ಮಾಡಿದರೆ ಏನು ತೊಂದರೆ ಇಲ್ಲ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಸುಪ್ರೀಂ ಕೋರ್ಟ್​ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + 2 =
Remember me
