ನವದೆಹಲಿ:ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದು, ಈ ಪ್ರಕರಣದಲ್ಲಿ ತನ್ನ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯವು ವಿಸ್ತೃತ ಪೀಠಕ್ಕೆ ವರ್ಗಾಯಿಸಿತು.
ಇದನ್ನೂ ಓದಿ:ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಬಂಧನ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು
ಕೇಜ್ರಿವಾಲ್​ ಜಾಮೀನು ಪಡೆದಿದ್ದರೂ ಸಿಬಿಐ ಪ್ರಕರಣದಲ್ಲಿ ಅರೆಸ್ಟ್​ ಆಗಿರುವುದರಿಂದ ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ.
ಮದ್ಯ ಹಗರಣ ಪ್ರಕರಣದಲ್ಲಿ ಏಪ್ರಿಲ್ 9ರಂದು ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ,ಕೇಜ್ರಿವಾಲ್​ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ದ್ವಿಸದಸ್ಯ ಪೀಠ ಮೇ 17ರಂದು ಇಡಿ ಮತ್ತು ಸಿಎಂ ವಾದ ಆಲಿಸಿ ತೀರ್ಪನ್ನು ಕಾಯ್ದಿರಿಸಿತ್ತು.
ಈಗ ಮಧ್ಯಂತರ ಜಾಮೀನು ತೀರ್ಪು ಹೊರಬಿದ್ದಿದೆ. ಈ ಸಂದರ್ಭದಲ್ಲಿ ಪೀಠ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ನ್ಯಾಯಾಲಯ ಯಾವುದೇ ಆದೇಶ ನೀಡಿಲ್ಲ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಯಾಗಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಅವರನ್ನು ಬಂಧಿಸಿರುವುದರಿಂದ ಹುದ್ದೆಯಿಂದ ಕೆಳಗಿಳಿಯುವ ನಿರ್ಧಾರ ಅವರದೇ ಆಗಿದೆ ಎಂದು ನ್ಯಾಯಾಲಯವು ಅಭಿಪ್ರಾಯಪಟ್ಟಿದೆ.
ನೀಟ್​ ಪೇಪರ್ ಸೋರಿಕೆ ವೀಡಿಯೋ ‘ನಕಲಿ’: ಸುಪ್ರೀಂಗೆ ಎನ್​ಟಿಎ ಅಫಿಡವಿಟ್ – ಮುಂದಿನ ವಾರದಿಂದ ಕೌನ್ಸೆಲಿಂಗ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:sixteen + seventeen =
Remember me
