ನವದೆಹಲಿ:ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿಗಳು ಹಿಜಾಬ್ ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಹಿಜಾಬ್ ಅನ್ನು ನಿಷೇಧಿಸಿದರೆ ಮಹಿಳಾ ಸಬಲೀಕರಣವನ್ನು ಹೇಗೆ ಸಾಧಿಸಬಹುದು ಎಂದು ನ್ಯಾಯಾಲಯವು ಕಾಲೇಜು ಆಡಳಿತವನ್ನು ಕೇಳಿದೆ.
ಇದನ್ನೂ ಓದಿ:ವೇಳಾಪಟ್ಟಿಯಂತೆ ನೀಟ್​ ಪಿಜಿ ಪರೀಕ್ಷೆ.. ತುರ್ತು ವಿಚಾರಣಾ ಮನವಿ ನಿರಾಕರಿಸಿದ ಸುಪ್ರೀಂಕೋರ್ಟ್​
ಇದರೊಂದಿಗೆ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಈ ಪ್ರಕರಣಕ್ಕೆ ಬಾಂಬೆ ಹೈಕೋರ್ಟ್ ತೀರ್ಪಿಗೆ ಸಹ ಸುಪ್ರೀಂ ಕೋರ್ಟ್ ತಡೆ ನೀಡಿದಂತಾಗಿದೆ. ಕಾಲೇಜು ಆಡಳಿತ ಮಂಡಳಿಯ ವರ್ತನೆಗೆ ನ್ಯಾಯಾಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ಯಾವುದನ್ನು ಧರಿಸಬಹುದು? ಯಾವುದನ್ನು ಧರಿಸಬಾರದು ಎಂಬುದನ್ನು ನೀವು ಹೇಗೆ ನಿರ್ಧರಿಸುತ್ತೀರಿ? ವಿದ್ಯಾರ್ಥಿನಿಯರು ಯಾವ ಬಟ್ಟೆ ಧರಿಸಬೇಕೆಂದು ಕಾಲೇಜುಗಳು ನಿರ್ಧರಿಸಿದರೆ ಮಹಿಳಾ ಸಬಲೀಕರಣದ ಅರ್ಥವೇನು ಎಂದು ಈ ಸಂದರ್ಭದಲ್ಲಿ ಪೀಠ ಪ್ರಶ್ನಿಸಿದೆ.
ಕಾಲೇಜಿನಲ್ಲಿ ಎಲ್ಲರೂ ಸಮಾನರು. ಇದು ಧಾರ್ಮಿಕ ಪ್ರದರ್ಶನಕ್ಕೆ ವೇದಿಕೆಯಾಗಬಾರದು ಎಂಬ ಉದ್ದೇಶದಿಂದ ಹಿಜಾಬ್ ಅನ್ನು ನಿಷೇಧಿಸಲಾಗಿದೆ ಎಂದು ಮುಂಬೈನ ಚೆಂಬೂರು ಕಾಲೇಜಿನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಹೆಸರಿನಲ್ಲೂ ಧರ್ಮವಿದೆ. ಅದನ್ನು ಹೇಗೆ ತೆಗೆದುಹಾಕುತ್ತೀರಿ ಎಂದು ಕಾಲೇಜು ಆಡಳಿತ ಮಂಡಳಿಗೆ ಪ್ರಶ್ನಿಸಿತು.
ಹೆಣ್ಣುಮಕ್ಕಳು ಏನು ಧರಿಸಬೇಕು ಎಂಬುದು ಅವರ ವೈಯಕ್ತಿಕ ನಿರ್ಧಾರ. ದೇಶದಲ್ಲಿ ಅನೇಕ ಧರ್ಮೀಯರು ವಾಸಿಸುತ್ತಿದ್ದಾರೆ ಎಂದು ಕಾಲೇಜು ಆಡಳಿತ ಮಂಡಳಿಗೆ ತಿಳಿದಿಲ್ಲವೇ? ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಂತಹ ವಿಷಯಗಳು ಇನ್ನೂ ಚರ್ಚೆಯಾಗುತ್ತಿರುವುದು ದುರದೃಷ್ಟಕರ. ನಮ್ಮನ್ನು ದುರುಪಯೋಗಪಡಿಸಿಕೊಳ್ಳಬಾರದು ಎಂದು ನ್ಯಾಯಾಲಯ ತೀಕ್ಷ್ಣವಾಗಿ ಪ್ರತಿಕ್ರಿಯಿಸಿತು.
ಪ್ರಕರಣದ ಮುಂದಿನ ವಿಚಾರಣೆಯನ್ನು ನ.18ಕ್ಕೆ ಮುಂದೂಡಿತು. ಕಾಲೇಜಿನಲ್ಲಿ ಹಿಜಾಬ್ ನಿಷೇಧದ ಕುರಿತು ಹಲವು ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟ್‌ನ ಕದ ತಟ್ಟಿದ್ದರು.
ವಾಕ್ಸಮರಕ್ಕಿಳಿದ ಮೆಗಾ​- ಅಲ್ಲು ಫ್ಯಾನ್ಸ್​..ಪವನ್​ ಎಂಟ್ರಿ! ಮುಂದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 11 =
Remember me
