
ನವದೆಹಲಿ:ಕನ್ವರ್ ಯಾತ್ರೆ ಮಾರ್ಗದಲ್ಲಿರುವ ಆಹಾರ ಮಾರಾಟ ಮಾಡುವ ಅಂಗಡಿಗಳಲ್ಲಿ ಮಾಲೀಕರ ಹೆಸರು ಹಾಗೂ ಅಲ್ಲಿ ಕೆಲಸ ಮಾಡುವವರ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ಪೊಲೀಸರು ಹೊರಡಿಸಿದ ಆದೇಶದ ಜಾರಿಯನ್ನು ಸುಪ್ರೀಂಕೋರ್ಟ್ ಸೋಮವಾರ (ಜುಲೈ 22) ತಡೆಹಿಡಿದಿದೆ. ಯಾವ ರೀತಿಯ ಆಹಾರ ನೀಡಲಾಗುತ್ತಿದೆ ಎಂಬುದನ್ನು ತಿಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.
ಇದನ್ನು ಓದಿ:ಔರಂಗಜೇಬ್ ಅಭಿಮಾನಿಗಳ ಸಂಘದ ನಾಯಕ ಉದ್ಧವ್ ಠಾಕ್ರೆ; ಅಮಿತ್ ಶಾ
ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ನಾಗರಿಕ ಹಕ್ಕುಗಳ ರಕ್ಷಣೆಗಾಗಿ ಎನ್‌ಜಿಒ (ಎಪಿಸಿಆರ್) ಸಲ್ಲಿಸಿದ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ನ್ಯಾಯಮೂರ್ತಿ ಎಸ್‌ವಿಎನ್ ಭಟ್ಟಿ ನೇತೃತ್ವದ ದ್ವಿಸದಸ್ಯ ಪೀಠ ಮಧ್ಯಂತರ ಆದೇಶವನ್ನು ಹೊರಡಿಸಿದೆ.
ಅಂಗಡಿಗಳಲ್ಲಿ ಮಾಲೀಕರ ಹೆಸರನ್ನು ಹಾಕುವಂತೆ ಸೂಚಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಉತ್ತರಿಸುವಂತೆ ಉತ್ತರ ಪ್ರದೇಶ , ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳಿಗೆ ಸುಪ್ರೀಂಕೋರ್ಟ್​​​​ ನೋಟಿಸ್​ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ಜುಲೈ 26ಕ್ಕೆ ನಿಗದಿಪಡಿಸಿದ್ದು ಅದರೊಳಗೆ ನೋಟಿಸ್​ಗೆ ಉತ್ತರಿಸುವಂತೆ ಸೂಚಿಸಿದೆ. ಅಲ್ಲದೆ ಆಹಾರ ಮಾರಾಟ ಮಾಡುವ ಅಂಗಡಿಗಳ ಮಾಲೀಕರು ಹಾಗೂ ಉದ್ಯೋಗಿಗಳ ಹೆಸರನ್ನು ಬರೆಯುವಂತೆ ಒತ್ತಾಯಿಸಬಾರದು ಎಂದು ನ್ಯಾಯಾಲಯ ಹೇಳಿದೆ.
ಕನ್ವರ್ ಯಾತ್ರೆಯು ಜುಲೈ 22 ರಂದು ಪ್ರಾರಂಭವಾಗಿ ಆಗಸ್ಟ್ 2 ರಂದು ಮುಕ್ತಾಯಗೊಳ್ಳುತ್ತದೆ. ಕನ್ವರ್​​​ ಯಾತ್ರೆ ಮಾರ್ಗದಲ್ಲಿರುವ ಆಹಾರ ಮಾರಾಟ ಮಾಡುವ ಅಂಗಡಿಗಳಲ್ಲಿ ಮಾಲೀಕರ ಹೆಸರು ಹಾಗೂ ಅಲ್ಲಿ ಕೆಲಸ ಮಾಡುವವರ ಹೆಸರನ್ನು ಪ್ರದರ್ಶಿಸಬೇಕು ಎಂದು ಮೊದಲು ಮುಜಫರ್‌ನಗರ ಪೊಲೀಸರು ಆದೇಶ ಹೊರಡಿಸಿದ್ದರು. ಆದರೆ ಭಾರೀ ವಿರೋಧದ ನಂತರ ಆದೇಶವನ್ನು ಹಿಂತೆಗೆದುಕೊಳ್ಳಲಾಯಿತು. ಬಳಿಕ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶುಕ್ರವಾರ (ಜುಲೈ 19) ಕಡ್ಡಾಯವೆಂದು ಮತ್ತೆ ಈ ಆದೇಶವನ್ನು ಹೊರಡಿಸಿತು. (ಏಜೆನ್ಸೀಸ್​​)
ಯೋಗಿ ಆದಿತ್ಯನಾಥ್​​ ಸರ್ಕಾರದ ನಡೆಗೆ ವ್ಯಾಪಕ ಟೀಕೆ; ಅಸ್ಪೃಶ್ಯತೆ ಪಾಲಿಸಬಾರದು ಎಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 9 =
Remember me
