ನವದೆಹಲಿ:ಉನ್ನತ ನ್ಯಾಯಾಲಯಕ್ಕೆ ನ್ಯಾಯಮೂರ್ತಿಗಳ ನೇಮಕಾತಿಗೆ ಅನುಸರಿಸಿರುವ ವಿಧಾನಕ್ಕೆ ಕೊಲಿಜಿಯಂನ ಇಬ್ಬರು ಸದಸ್ಯರಿಂದ ಆಕ್ಷೇಪ ವ್ಯಕ್ತವಾದ ಕಾರಣ ಈ ಶಿಫಾರಸನ್ನು ಹಿಂಪಡೆಯಲಾಗಿದೆ. ಈ ಮಧ್ಯೆ, ಆಕ್ಷೇಪ ವ್ಯಕ್ತಪಡಿಸಿದ್ದ ಇಬ್ಬರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂಕೋರ್ಟ್ ಇದೇ ಮೊದಲ ಬಾರಿಗೆ ಬಹಿರಂಗಪಡಿಸಿದೆ.
ಸೆ. 30ರಂದು ನಡೆದ ಕೊಲಿಜಿಯಂ ಸಭೆಯನ್ನು ಹೆಚ್ಚಿನ ಚರ್ಚೆ ಇಲ್ಲದೆ ರದ್ದುಗೊಳಿಸಲಾಯಿತು ಎಂದು ಕೊಲಿಜಿಯಂನ ಅಧ್ಯಕ್ಷರೂ ಆಗಿರುವ ಸುಪ್ರೀಂಕೋರ್ಟ್​ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು.ಲಲಿತ್ ಹೇಳಿದ್ದಾರೆ. ಈ ಸಭೆಯ ನಂತರ ಸಿಜಿಐ ಲಲಿತ್, ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ 10 ಹೆಸರನ್ನು ಪ್ರಸ್ತಾಪಿಸಿದ್ದರು. ಈ ಬಗ್ಗೆ ಸಭೆಯಲ್ಲಿ ಭಾಗವಹಿಸದ ಸದಸ್ಯರಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರು. ಆದರೆ, ಈ ಆಯ್ಕೆಗಳು ಏಕಪಕ್ಷೀಯವಾಗಿದೆ ಎಂದು ಕೊಲಿಜಿಯಂ ಸದಸ್ಯರಾಗಿರುವ ಹಿರಿಯ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಎಸ್. ಅಬ್ದುಲ್ ನಜೀರ್ ಆಕ್ಷೇಪ ವ್ಯಕ್ತಪಡಿಸಿದ್ದರು. ನ್ಯಾಯಮೂರ್ತಿಗಳಾದ ಎಸ್.ಕೆ ಕೌಲ್ ಮತ್ತು ಕೆ.ಎಂ. ಜೋಸೆಫ್ ಕೊಲಿಜಿಯಂನಲ್ಲಿರುವ ಇನ್ನಿಬ್ಬರು ಸದಸ್ಯರು. ಕೊಲಿಜಿಯಂ ಸಿಜೆಐ ನೇತೃತ್ವದ ಐವರು ಹಿರಿಯ ನ್ಯಾಯಮೂರ್ತಿಗಳ ಸಮಿತಿಯಾಗಿದೆ. ಇದು ಸುಪ್ರೀಂಕೋರ್ಟ್ ಮತ್ತು ರಾಜ್ಯಗಳ ಹೈಕೋರ್ಟ್​ನ
ನ್ಯಾಯಮೂರ್ತಿಗಳ ನೇಮ ಕಾತಿಗೆ ಸರ್ಕಾರಕ್ಕೆ ಶಿಫಾರಸು ಕಳುಹಿಸುತ್ತದೆ. ಈ ಮಧ್ಯೆ, ನವೆಂಬರ್​ನಲ್ಲಿ ಸಿಜೆಐ ಲಲಿತ್ ನಿವೃತ್ತರಾಗುವ ಕಾರಣ ಹೊಸ ಸಿಜೆಐ ನೇಮಕ ಆಗುವರೆಗೆ ಕೊಲಿಜಿಯಂ ಶಿಫಾರಸನ್ನು ಸ್ಥಗಿತಗೊಳಿಸಲಾಗಿದೆ. ತಮ್ಮ ಉತ್ತರಾಧಿಕಾರಿಯನ್ನು ಸೂಚಿಸುವಂತೆ ಸರ್ಕಾರ ಸಿಜೆಐ ಲಲಿತ್​ಗೆ ಅ.7ಕ್ಕೆ ಪತ್ರ ಬರೆದಿದೆ. ಸೇವಾ ಹಿರಿತನ ದಲ್ಲಿ ಜಸ್ಟೀಸ್ ಚಂದ್ರಚೂಡ್ ಸಿಜೆಐ ಆಗುವ ಸಾಧ್ಯತೆ ಇದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ವಿಚಾರಣೆಯನ್ನು ಕೇರಳದಿಂದ ಕರ್ನಾಟಕಕ್ಕೆ ವರ್ಗಾಯಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸಮ್ಮತಿಸಿದೆ. ಕೇರಳದಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ವಿಚಾರಣೆ ಸಾಧ್ಯವಿಲ್ಲ ಎಂದು ಇಡಿ ಹೇಳಿದೆ. ಈ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇರಳ ಸರ್ಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಯು. ಯು. ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ಆರ್ ಭಟ್ ಅವರಿದ್ದ ಪೀಠವು ನೋಟಿಸ್ ನೀಡಿದ್ದು, ವಿಚಾರಣೆಯನ್ನು ಅ. 20ಕ್ಕೆ ಮುಂದೂಡಿದೆ. ಈ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಸ್ವಪ್ನಾ ಸುರೇಶ್ ಕೇರಳದಲ್ಲಿರುವ ಯುಎಇ ಕಾನ್ಸುಲೇಟ್​ನ ಮಾಜಿ ಉದ್ಯೋಗಿಯಾಗಿದ್ದು, ಅವರನ್ನು 2020 ಜುಲೈ 11ರಂದು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್​ಐಎ) ವಶಕ್ಕೆ ತೆಗೆದುಕೊಂಡಿತ್ತು.
ಕೋವಿಡ್​ನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡದಿರುವ ರಾಜಸ್ಥಾನ ಸರ್ಕಾರವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಕರೊನಾ ಸಂತ್ರಸ್ತರಿಗೆ ನೀವೇನು ದಾನ ಕೊಡುತ್ತಿಲ್ಲ ಎಂದು ಚಾಟಿ ಬೀಸಿದೆ. ಈ ಸಂಬಂಧ ರಾಜಸ್ಥಾನ ಸರ್ಕಾರ ಸಲ್ಲಿಸಿದ್ದ ಅಫಿಡವಿಟ್ ಅತೃಪ್ತಿಕರವಾಗಿದ್ದು, ವಿವರವಾದ ವರದಿ ಸಲ್ಲಿಸುವಂತೆ ನ್ಯಾಯಮೂರ್ತಿಗಳಾದ ಎಂ.ಆರ್ ಶಾ ಮತ್ತು ಕೃಷ್ಣ ಮುರಾರಿ ಅವರಿದ್ದ ಪೀಠವು ಸೂಚಿಸಿದೆ. ಕರೊನಾ ಸಾಂಕ್ರಾಮಿಕ ರೋಗಕ್ಕೆ ಬಲಿಯಾದವರ ಕುಟಂಬಕ್ಕೆ 50 ಸಾವಿರ ರೂ. ಪರಿಹಾರ ನೀಡಬೇಕೆಂಬ ಆದೇಶವನ್ನು ರಾಜಸ್ಥಾನ ಸರ್ಕಾರ ಪಾಲಿಸುತ್ತಿಲ್ಲ ಎಂದು ಆರೋಪಿಸಿ ವಕೀಲ ಗೌರವ್ ಕುಮಾರ್ ಬನ್ಸಾಲ್ ಅರ್ಜಿ ಸಲ್ಲಿಸಿದ್ದಾರೆ.
ಎಲ್ಲ ರಾಜಕೀಯ ಪಕ್ಷಗಳಿಗೆ ತಮ್ಮ ವೆಬ್​ಸೈಟ್​ನ ಮುಖಪುಟದಲ್ಲಿ ಅಭ್ಯರ್ಥಿಗಳ ಕ್ರಿಮಿನಲ್ ಪ್ರಕರಣಗಳ ವಿವರ ಪ್ರಕಟಿಸಲು ಸೂಚಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಈ ಮನವಿ ಬಗ್ಗೆ ಚುನಾವಣಾ ಆಯೋಗವನ್ನು ಸಂರ್ಪಸು ವಂತೆ ಸೂಚಿಸಿದೆ.
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವುದು ನ್ಯಾಯಾಲಯದ ಕೆಲಸವೇ?, ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ?, ಇದಕ್ಕಾಗಿ ನಿಮಗೆ ದಂಡ ವಿಧಿಸಬಹುದಲ್ಲವೇ?, ನಿಮ್ಮ ಅರ್ಜಿಯಲ್ಲಿ ಯಾವ ಮೂಲಭೂತ ಹಕ್ಕು ಉಲ್ಲಂಘನೆಯಾಗಿದೆ ಎಂದು ತಿಳಿಸಿಲ್ಲ? ನೀವು ನ್ಯಾಯಾಲಯಕ್ಕೆ ಬಂದ ಮಾತ್ರಕ್ಕೆ ನಾವು ಕಾನೂನನ್ನು ಗಾಳಿಗೆ ತೂರಬೇಕೇ ಎಂದು ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಅಭಯ್ ಎಸ್ ಓಕಾ ಅವರಿದ್ದ ಪೀಠ ಅರ್ಜಿದಾರರನ್ನು ಖಾರವಾಗಿ ಪ್ರಶ್ನಿಸಿದೆ. ಎನ್​ಜಿಒ ಗೋವಂಶ ಸೇವಾ ಸದನ ಮತ್ತು ಇತರರು ಸುಪ್ರಿಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
