ನವದೆಹಲಿ: ರಾಷ್ಟ್ರಪತಿಗಳು ದಯಾ ಅರ್ಜಿ ವಜಾಗೊಳಿಸಿದ್ದನ್ನು ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಕೋರಿ ನಿರ್ಭಯಾ ಪ್ರಕರಣದ ಪ್ರಮುಖ ಅಪರಾಧಿ ಮುಖೇಶ್​ಸಿಂಗ್​ ಸಲ್ಲಿಸಿದ್ದ ಅರ್ಜಿಯನ್ನು ತುರ್ತುವಿಚಾರಣೆಗೆಗಳ ಪಟ್ಟಿಯಲ್ಲಿ ಸೇರಿಸುವಂತೆ ಸುಪ್ರೀಂಕೋರ್ಟ್​ ಮುಖ್ಯ ನಾಯಮೂರ್ತಿ ವಕೀಲರಿಗೆ ಸೂಚನೆ ನೀಡಿದ್ದಾರೆ.ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಶರದ್​ ಅರವಿಂದ ಬೊಬ್ಡೆ ಅವರು ಮುಖೇಶ್​ಸಿಂಗ್​ ಪರ ವಾದ ಮಾಡುತ್ತಿರುವ ವಕೀಲರಿಗೆ ಅರ್ಜಿಯನ್ನು ತುರ್ತು ವಿಚಾರಣೆಗಳ ಪಟ್ಟಿಗೆ ಸೇರಿಸುವಂತೆ ಸೂಚಿಸಿದರು.
ರಾಷ್ಟ್ರಪತಿ ರಾಮನಾಥ ಕೋವಿಂದ್​ ಅವರು, ಮುಖೇಶ್​ಸಿಂಗ್​ ಸಲ್ಲಿಸಿದ್ದ ದಯಾ ಅರ್ಜಿಯನ್ನು ಕೇವಲ 4 ದಿನಗಳಲ್ಲಿ ತಿರಸ್ಕರಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ಆತ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದ್ದಾನೆ.
ಶತ್ರುಘ್ನ ಚೌಹಾನ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪನ್ನು ಅಪರಾಧಿ ಮುಖೇಶ್​ಸಿಂಗ್​ ಉಲ್ಲೇಖಿಸಿ ನ್ಯಾಯ ನೀಡುವಂತೆ ಮನವಿ ಸಲ್ಲಿಸಿದ್ದಾನೆ. (ಏಜೆನ್ಸೀಸ್​)
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + 16 =
Remember me
