ನವದೆಹಲಿ:ಲಾಕ್​ಡೌನ್​ನಿಂದಾಗಿ ಊರು ಸೇರಲು ಪ್ರಯಾಣ ಬೆಳೆಸಿ ಮಾರ್ಗ ಮಧ್ಯೆ ಸಿಲುಕಿರುವ ವಲಸಿಗರಿಗೆ ಉಚಿತ ಸಾರಿಗೆ ವ್ಯವಸ್ಥೆಗಿಂತಲೂ ಮೊದಲು ಆಹಾರ ಮತ್ತು ಆಶ್ರಯ ಒದಗಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಿಳಿಸಬೇಕೆಂದು ಕೇಂದ್ರಕ್ಕೆ ನಿರ್ದೇಶನ ಕೋರಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.ರಾಷ್ಟ್ರಾದ್ಯಂತ ವಲಸೆ ಕಾರ್ಮಿಕರ ಸಂಚಾರದ ಮೇಲೆ ನಿಗಾವಹಿಸಲು ನ್ಯಾಯಾಲಯಗಳಿಗೆ ಸಾಧ್ಯವಾಗುವುದಿಲ್ಲ. ಅಂತೆಯೇ ನಿಲ್ಲಿಸುವುದೂ ಅಸಾಧ್ಯ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ರಾಜ್ಯ ಸರ್ಕಾರಗಳಿಗೆ ಬಿಟ್ಟ ವಿಚಾರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ :ಹೆರಿಗೆ ಆಸ್ಪತ್ರೆಗೆ ಪೊಲೀಸರ ವೇಷದಲ್ಲಿ ನುಗ್ಗಿ ಗುಂಡಿನ ದಾಳಿ, 16 ಜನರ ಸಾವುನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಈ ವಲಸೆ ಕಾರ್ಮಿಕರನ್ನು ರಸ್ತೆಗಳಲ್ಲಿ ನಡೆಯದಂತೆ ತಡೆಯಲು ಏನಾದರೂ ಮಾರ್ಗೋಪಾಯವಿದೆಯೇ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿದೆ. ರಾಜ್ಯಗಳು ವಲಸೆ ಕಾರ್ಮಿಕರಿಗೆ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿವೆ ಆದರೆ ಜನರು ಆ ಸೌಲಭ್ಯ ಬಳಸಿಕೊಳ್ಳುವ ಬದಲು ಕಾಲ್ನಡಿಗೆಯಲ್ಲಿ ತೆರಳಲು ಮುಂದಾದರೆ ಏನೂ ಮಾಡಲಾಗುವುದಿಲ್ಲ ಎಂದು ಮೆಹ್ತಾ ಹೇಳಿದರು.
ನೋಡನೋಡುತ್ತಿದ್ದಂತೆ ಧರೆಗುರುಳಿದರು ಸ್ಕೈಡೈವರ್​​ಗಳು….!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 1 =
Remember me
