ನವದೆಹಲಿ:ಇಂದು (ಆ.20) ಕೋಲ್ಕತ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​, ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ರಾಷ್ಟ್ರೀಯ ಕಾರ್ಯಪಡೆಯನ್ನು ರಚನೆ ಮಾಡಿದ್ದು, ಮೂರು ವಾರಗಳ ಒಳಗೆ ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಕೇಳಿದೆ.
ರಾಷ್ಟ್ರೀಯ ಕಾರ್ಯಪಡೆಯು ತನ್ನ ಅಂತಿಮ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ನ್ಯಾಯ ಪೀಠವು ಆದೇಶಿಸಿತು. ಅಲ್ಲದೆ, ಸದ್ಯ ಅಸ್ತಿತ್ವದಲ್ಲಿರುವ ಕಾನೂನುಗಳು ವೈದ್ಯರ ಸಾಂಸ್ಥಿಕ ಸುರಕ್ಷತೆಯನ್ನು ಸಮರ್ಪಕವಾಗಿ ತಿಳಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿತು.
ಉನ್ನತ ನ್ಯಾಯಾಲಯ ರಚನೆ ಮಾಡಿರುವ ರಾಷ್ಟ್ರೀಯ ಕಾರ್ಯಪಡೆಯು ಸರ್ಜನ್​ ವೈಸ್​ ಅಡ್ಮಿರಲ್​ ಆರ್​ ಸರಿನ್​, ಡಾ. ಡಿ ನಾಗೇಶ್ವರ್​ ರೆಡ್ಡಿ, ಡಾ. ಎಂ. ಶ್ರೀನಿವಾಸ್​, ಡಾ. ಪ್ರತಿಮಾ ಮೂರ್ತಿ, ಡಾ. ಗೋವರ್ಧನ್​ ದತ್​ ಪುರಿ, ಡಾ. ಸೌಮಿತ್ರಾ ರಾವತ್​, ದೆಹಲಿಯ ಏಮ್ಸ್ ಕಾರ್ಡಿಯಾಲಜಿ ಮುಖ್ಯಸ್ಥೆ​​ ಪ್ರೊಫೆಸರ್​ ಅನಿತಾ ಸಕ್ಸೆನಾ, ಮುಂಬೈನ ಗ್ರ್ಯಾಂಡ್​ ಮೆಡಿಕಲ್​ ಕಾಲೇಜಿನ ಡೀನ್​ ಪಲ್ಲವಿ ಸಪ್ರೆ ಹಾಗೂ ಏಮ್ಸ್​ ನರವಿಜ್ಞಾನ ವಿಭಾಗದ ಡಾ. ಪದ್ಮ ಶ್ರೀವಾಸ್ತವ ಅವರನ್ನು ಒಳಗೊಂಡಿದೆ.
ಈ ಕಾರ್ಯಪಡೆಯಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿ, ಕೇಂದ್ರ ಗೃಹ ಕಾರ್ಯದರ್ಶಿ, ಕೇಂದ್ರ ಆರೋಗ್ಯ ಕಾರ್ಯದರ್ಶಿ, ರಾಷ್ಟ್ರೀಯ ವೈದ್ಯಕೀಯ ಆಯೋಗದ ಅಧ್ಯಕ್ಷರು ಮತ್ತು ರಾಷ್ಟ್ರೀಯ ಪರೀಕ್ಷಾ ಮಂಡಳಿಯ ಅಧ್ಯಕ್ಷರನ್ನೂ ಒಳಗೊಂಡಿರುತ್ತದೆ. ಈ ಕಾರ್ಯಪಡೆಯು ಸುರಕ್ಷತೆ, ಕೆಲಸದ ಪರಿಸ್ಥಿತಿಗಳು ಮತ್ತು ವೈದ್ಯಕೀಯ ವೃತ್ತಿಪರರ ಯೋಗಕ್ಷೇಮ ಮತ್ತು ಇತರ ಸಂಬಂಧಿತ ವಿಷಯಗಳಿಗೆ ಸಂಬಂಧಿಸಿದಂತೆ ಶಿಫಾರಸುಗಳನ್ನು ಮಾಡುತ್ತದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.
ಏನಿದು ಪ್ರಕರಣ?ವಿರಾಮವಿಲ್ಲದೆ ಸುಮಾರು 36 ಗಂಟೆಗಳ ಕಾಲ ವಿಸ್ತರಿಸಿದ ಶಿಫ್ಟ್ ಮತ್ತು ಅಧ್ಯಯನದಿಂದ ಬಳಲಿದ ಬಳಿಕ ಆಗಸ್ಟ್​ 9ರಂದು ಆಸ್ಪತ್ರೆಯ ಸೆಮಿನಾರ್​ ರೂಮ್​ನಲ್ಲಿನ ವೇದಿಕೆಯ ಮೇಲೆ ಸಂತ್ರಸ್ತೆ ಮಲಗಿದ್ದಳು. ಈ ವೇಳೆ ಆಕೆಯ ಮೇಲೆ ಓರ್ವ ಅಥವಾ ಸಾಮೂಹಿಕವಾಗಿ (ಇನ್ನೂ ತನಿಖೆ ನಡೆಯುತ್ತಿದೆ) ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ಬಳಿಕ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಮರುದಿನ ಬೆಳಿಗ್ಗೆ ಸೆಮಿನಾರ್ ಹಾಲ್​ಗೆ ಬಂದ ಇಂಟರ್ನ್‌ಗಳು ಮತ್ತು ಸಹ ಸ್ನಾತಕೋತ್ತರ ಟ್ರೈನಿ ವೈದ್ಯರು ಆಕೆಯ ದೇಹವನ್ನು ಕಂಡಾಗ ಈ ಪ್ರಕರಣ ಬೆಳಕಿಗೆ ಬಂದಿತು. ಸಂತ್ರಸ್ತೆಯ ಮೃತದೇಹದ ಪಕ್ಕದಲ್ಲೇ ಲ್ಯಾಪ್‌ಟಾಪ್, ನೋಟ್‌ಬುಕ್ ಮತ್ತು ಸೆಲ್‌ಫೋನ್ ಹಾಗೇ ಇತ್ತು.
ಓರ್ವನ ಬಂಧನಸದ್ಯ ಈ ಪ್ರಕರಣದಲ್ಲಿ ಸಂಜೋಯ್​ ರಾಯ್​ ಎಂಬಾತನನ್ನು ಆಗಸ್ಟ್ 10 ರಂದು ಕೋಲ್ಕತ್ತ ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ವರದಿಗಳ ಪ್ರಕಾರ ಆರೋಪಿ 2019ರಿಂದ ಕೋಲ್ಕತ್ತ ಪೊಲೀಸರ ವಿಪತ್ತು ನಿರ್ವಹಣಾ ಗುಂಪಿನೊಂದಿಗೆ ನಾಗರಿಕ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿದ್ದನು. ನಂತರ, ಆತನನ್ನು ಪೊಲೀಸ್ ವೆಲ್​ಫೇರ್​ ಸೆಲ್​ಗೆ ವರ್ಗಾಯಿಸಲಾಯಿತು ಮತ್ತು ಆಸ್ಪತ್ರೆಯಲ್ಲಿನ ಪೊಲೀಸ್ ಔಟ್‌ಪೋಸ್ಟ್‌ಗೆ ನಿಯೋಜಿಸಲಾಯಿಗಿತ್ತು. ಈ ರಾಯ್, ಆಗಾಗ ಕೋಲ್ಕತ್ತ ಪೊಲೀಸ್ ಟೀ ಶರ್ಟ್ ಧರಿಸಿ ಅಧಿಕಾರಿಯಂತೆ ನಟಿಸುತ್ತಿದ್ದನು ಮತ್ತು ಬ್ಯಾರಕ್‌ಗಳಲ್ಲಿ ಉಳಿಯಲು ತಮ್ಮ ಸಂಪರ್ಕಗಳನ್ನು ಬಳಸುತ್ತಿದ್ದರು ಎಂದು ಮೂಲಗಳು ಬಹಿರಂಗಪಡಿಸಿವೆ. ಆಸ್ಪತ್ರೆಯಲ್ಲೇ ಈತ ದಂಧೆ ನಡೆಸುತ್ತಿದ್ದ. ರೋಗಿಗಳ ಸಂಬಂಧಿಕರಿಗೆ ಹಾಸಿಗೆ ಕೊಡಿಸುವುದಾಗಿ ಭರವಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಹೆಚ್ಚಿನ ತನಿಖೆ ನಡೆದಾಗ ಆಘಾತಕಾರಿ ಸಂಗತಿಗಳು ಬಯಲಾಗಿವೆ. ಅರೋಪಿ ರಾಯ್, ಮೊಬೈಲ್ ಫೋನ್‌ನಲ್ಲಿ ಹಲವಾರು ಹಿಂಸಾತ್ಮಕ ಮತ್ತು ಅಶ್ಲೀಲ ಫೋಟೋ ಮತ್ತು ವಿಡಿಯೋಗಳಿವೆ. ಈಗಾಗಲೇ ಆತ ಹಲವು ಬಾರಿ ಮದುವೆ ಆಗಿ ವಂಚನೆ ಮಾಡಿರುವ ಆರೋಪವೂ ಇದೆ.
ಭಾರಿ ಪ್ರತಿಭಟನೆಈ ಭಯಾನಕ ಅಪರಾಧವು ದೇಶದೆಲ್ಲಡೆ ವ್ಯಾಪಕ ಆಕ್ರೋಶವನ್ನು ಹುಟ್ಟುಹಾಕಿದೆ. ಪಶ್ಚಿಮ ಬಂಗಾಳ ಮತ್ತು ಭಾರತದ ಇತರ ಭಾಗಗಳಲ್ಲಿ ವೈದ್ಯರು ಮತ್ತು ನರ್ಸ್​ಗಳು ಭಾರಿ ಮುಷ್ಕರಗಳು ಮತ್ತು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಡಾ. ಸಂದೀಪ್ ಘೋಷ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರನ್ನು ಸಿಬಿಐನಿಂದ ವಿಚಾರಣೆಗೆ ಒಳಪಡಿಸಲಾಗಿದೆ.
ಈ ಘಟನೆಗೆ ಪ್ರತಿಕ್ರಿಯೆಯಾಗಿ, ಪಶ್ಚಿಮ ಬಂಗಾಳ ಸರ್ಕಾರವು ಕೆಲಸದ ಸ್ಥಳಗಳಲ್ಲಿ, ವಿಶೇಷವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸಲು ಹಲವಾರು ಕ್ರಮಗಳನ್ನು ಘೋಷಿಸಿದೆ. ಈ ಕ್ರಮಗಳಲ್ಲಿ ಮಹಿಳೆಯರಿಗೆ ವಿಶೇಷವಾಗಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರಿಗೆ ಗೊತ್ತುಪಡಿಸಿದ ವಿಶ್ರಾಂತಿ ಕೊಠಡಿಗಳು ಮತ್ತು ಸಿಸಿಟಿವಿ ಮಾನಿಟರ್ ಒಳಗೊಂಡ ಸುರಕ್ಷಿತ ವಲಯಗಳ ಸ್ಥಾಪನೆಯನ್ನು ಒಳಗೊಂಡಿವೆ.(ಏಜೆನ್ಸೀಸ್​)
ಅಂತ್ಯಸಂಸ್ಕಾರ ನಡೆದ 3 ಗಂಟೆ ನಂತ್ರ FIR ದಾಖಲಿಸಿದ್ದೇಕೆ? ಕೋಲ್ಕತ ಆಸ್ಪತ್ರೆ ವಿರುದ್ಧ ಸುಪ್ರೀಂಕೋರ್ಟ್​ ಕಿಡಿ

ಅಪರೂಪದ ಡೂಮ್ಸ್​ಡೇ ಮೀನು ಸಾವು! ಸಮುದ್ರ ದೇವರ ಸಂದೇಶ, ಜಗತ್ತಿಗೆ ಕಾದಿದೆ ಗಂಡಾಂತರ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
