ವಿಜಯಪುರ:ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿದ್ದು, ಮುಂದೆಯೂ ನಮ್ಮ ಪರವಾಗಿಯೇ ತೀರ್ಪು ಬರುವ ನಿರೀಕ್ಷೆ ಇದೆ ಎಂದು ಉಡುಪಿಯ ಸರ್ಕಾರಿ ಕಾಲೇಜಿನ ಉಪಾಧ್ಯಕ್ಷ ಯಶಪಾಲ ಸುವರ್ಣ ಪ್ರತಿಕ್ರಿಯಿಸಿದರು.
ದೇಶದ್ರೋಹಿ ಸಂಘಟನೆಗಳು ಹೈಕೋರ್ಟ್​ನ ತೀರ್ಪು ಧಿಕ್ಕರಿಸಿ ಸುಪ್ರೀಂ ಕೋರ್ಟ್​ಗೆ ಹೋದರು. ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಪ್ರಕರಣ ವರ್ಗಾಯಿಸಿದ್ದು ಇದೀಗ ಆ ಪೀಠದ ತೀರ್ಪಿಗೆ ಬದ್ಧರಾಗಿರುತ್ತೇವೆ‌. ಮುಂದೆಯೂ ನಮ್ಮ ಪರವಾಗಿ ತೀರ್ಪು ಬರುವ ವಿಶ್ವಾಸ ಇದೆ ಎಂದು ಗುರುವಾರ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಆರು ಜನ ವಿದ್ಯಾರ್ಥಿನಿಯರು ದ್ರೇಶದ್ರೋಹಿ ಸಂಘಟನೆಗಳಾದ ಪಿಎಫ್​ಐ, ಎಸ್​ಡಿಪಿಐ ಮಾತು ಕೇಳಿ ಸುಪ್ರೀಂ ಕೋರ್ಟ್​ಗೆ ಹೋದರು. ನಮ್ಮ ಕಾಲೇಜಿಗೆ 30 ಕ್ಕೂ ಅಧಿಕ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳು ಪ್ರವೇಶ ಪಡೆದಿದ್ದಾರೆ. ಆದರೆ ಕೆಲವು ಸಂಘಟನೆಗಳು ಆ ಅರು ಮಕ್ಕಳ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ. ಇನ್ನುಳಿದ ಮಕ್ಕಳು ಕಳೆದ ವರ್ಷಕ್ಕಿಂತ ಹೆಚ್ಚಿನ ಅಂಕ ಪಡೆದು ದೇಶದ್ರೋಹಿ ಸಂಘಟನೆಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 18 =
Remember me
