ನವದೆಹಲಿ:ಆಧಾರ್ ಸಂಖ್ಯೆ ಜೋಡಣೆಯಾಗಿಲ್ಲ ಎಂಬ ಕಾರಣಕ್ಕೆ ಮೂರು ಕೋಟಿ ಪಡಿತರ ಫಲಾನುಭವಿಗಳ ರೇಷನ್ ಕಾರ್ಡ್ ರದ್ದು ಮಾಡಿರುವುದು ಗಂಭೀರ ಮತ್ತು ಕಳವಳಕಾರಿ ವಿಷಯ ಎಂದಿರುವ ಸುಪ್ರೀಂಕೋರ್ಟ್, ಈ ಬಗ್ಗೆ ನಾಲ್ಕು ವಾರದಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಮತ್ತು ಎಲ್ಲ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ರೇಷನ್ ಕಾರ್ಡ್ ರದ್ದು ಮಾಡಿರುವುದನ್ನು ಪ್ರಶ್ನಿಸಿರುವುದು ಬರೀ ಪ್ರತಿರೋಧದ ದಾವೆಯಲ್ಲ. ಇದು ತುಂಬ ಕಳವಳಕಾರಿ ವಿಷಯ. ಇಂಥ ಅರ್ಜಿಯನ್ನು ಮೊದಲು ಸಂಬಂಧಿಸಿದ ಹೈಕೋರ್ಟ್​ಗೆ ಸಲ್ಲಿಸಬೇಕಿತ್ತು. ಆದರೂ ಈ ಅರ್ಜಿಯ ವಿಚಾರಣೆಯನ್ನು ಇನ್ನೊಂದು ದಿನ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ.
3 ಕೋಟಿ ಪಡಿತರ ಚೀಟಿ ರದ್ದತಿಯ ಪರಿಣಾಮ ಗಹನವಾಗಿದೆ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ಉತ್ತರ ನೀಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಅಮನ್ ಲೇಖಿ, ಕೇಂದ್ರ ಸರ್ಕಾರ ರೇಷನ್ ಕಾರ್ಡ್ ರದ್ದು ಮಾಡಿದೆ ಎನ್ನುವುದು ತಪ್ಪಾಗುತ್ತದೆ. ಈ ವಿಷಯದಲ್ಲಿ ಸರ್ಕಾರ ಈಗಾಗಲೇ ಪ್ರತಿಕ್ರಿಯೆ ದಾಖಲಿಸಿದೆ ಎಂದರು. ಆಧಾರ್ ವಿಷಯವೂ ಈ ಪ್ರಕರಣದಲ್ಲಿ ಇರುವ ಕಾರಣ ಕೇಂದ್ರ ತನ್ನ ಅನಿಸಿಕೆ ತಿಳಿಸಬೇಕು ಎಂದು ಕೋರ್ಟ್ ಹೇಳಿದೆ.
ಆಧಾರ್ ಕಾರ್ಡ್ ಹೊಂದಿಲ್ಲವೆಂಬ ಕಾರಣಕ್ಕೆ ಪಡಿತರ ಪೂರೈಕೆಯಿಂದ ವಂಚಿತರಾದ ಜನರು ಸಾವನ್ನಪ್ಪಿರುವ ಕುರಿತ ಅರ್ಜಿಯನ್ನು ಸುಪ್ರೀಂಕೋರ್ಟ್ 2019ರ ಡಿಸೆಂಬರ್​ನಲ್ಲಿ ವಿಚಾರಣೆ ನಡೆಸಿದಾಗ ಕೇಂದ್ರ ಸರ್ಕಾರ ಪ್ರತಿಕ್ರಿಯೆ ದಾಖಲಿಸಿತ್ತು. ನ್ಯಾಯಬೆಲೆ ಅಂಗಡಿ ಮೂಲಕ ಪಡಿತರ ಸಿಗಲಿಲ್ಲವೆಂದು ಜನರು ಮರಣಿಸಿಲ್ಲ ಎಂದು ಹೇಳಿತ್ತು. ಅದನ್ನೇ ಹೆಚ್ಚುವರಿ ಸಾಲಿಸಿಟರ್ ಜನರಲ್ ಈಗ ನ್ಯಾಯಪೀಠದ ಗಮನಕ್ಕೆ ತಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + nine =
Remember me
