ನವದೆಹಲಿ:ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಿಂದ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ಇಂದು (ಸೆ.21) ಆದೇಶಿಸಿದೆ.
ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ.
ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.
ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.
ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.
ವಾದ-ವಿವಾದಗಳನ್ನು ಆಲಿಸಿದ ಬಳಿಕ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು.
ಕಾವೇರಿದು ಅದೇ ನಿಷ್ಠೆ, ತಜ್ಞರು ಸಮೀಕ್ಷೆ ನಡೆಸುತ್ತಲೇ ಇದ್ದಾರೆ: ನಿರ್ದೇಶಕ ಮಂಜು ಮಾಂಡವ್ಯ ಪೋಸ್ಟ್​ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + ten =
Remember me
