ನವದೆಹಲಿ: ಮಕ್ಕಳಿಗೆ ಶಿಕ್ಷಣ ಮಾತೃಭಾಷೆಯಲ್ಲೇ ಕೊಡಬೇಕೋ ಬೇಡವೋ ಎಂಬ ವಿಷಯ ದೀರ್ಘಕಾಲದಿಂದ ಕಗ್ಗಂಟಾಗಿಯೇ ಉಳಿದಿದೆ. ಮಾತ್ರವಲ್ಲ ಈ ವಿಷಯದಲ್ಲಿ ಆಗಾಗ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಲೇ ಇರುವುದರಿಂದ, ಮಾತೃಭಾಷೆಯಲ್ಲಿ ಶಿಕ್ಷಣ ಕುರಿತ ವಿಚಾರ ಇನ್ನೂ ಇತ್ಯರ್ಥವಾಗಿಲ್ಲ.
ಇದೀಗ ಈ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಸುಪ್ರೀಂಕೋರ್ಟ್​ ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ. ಒಂದರಿಂದ ಐದನೇ ತರಗತಿವರೆಗೆ ಮಕ್ಕಳಿಗೆ ಮಾತೃಭಾಷೆಯಲ್ಲಿ ಶಿಕ್ಷಣ ನೀಡುವ ಸಂಬಂಧ ಅಲ್ಲಿನ ಹೈಕೋರ್ಟ್​ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹೈಕೋರ್ಟ್​ ಆದೇಶ ಮಕ್ಕಳ ಮೇಲೆ ದುಷ್ಪರಿಣಾಮ ಬೀಳುತ್ತದೆ. ಎಲ್ಲ ಮಕ್ಕಳೂ ಇಂಗ್ಲಿಷ್​ನಲ್ಲೇ ಶಿಕ್ಷಣ ಪಡೆಯಲು ಬಯಸುತ್ತಿದ್ದಾರೆ ಎಂದು ಸರ್ಕಾರದ ಪರ ವಕೀಲ ಕೆ.ವಿ.ವಿಶ್ವನಾಥನ್​ ವಾದ ಮಂಡಿಸಿದರು.ಮುಖ್ಯ ನ್ಯಾಯಮೂರ್ತಿ ಎಸ್​.ಎ. ಬೊಬ್ಡೆ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಎ.ಎಸ್​.ಬೋಪಣ್ಣ, ವಿ. ರಾಮಸುಬ್ರಮಣಿಯನ್​ ಅವರಿದ್ದ ಪೀಠ ವಾದವನ್ನು ಆಲಿಸಿ, ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿತು. ಮಕ್ಕಳು ಮಾತೃಭಾಷೆಯಲ್ಲೇ ಶಿಕ್ಷಣ ಪಡೆಯುವುದು ಅತ್ಯಗತ್ಯ ಎಂದ ಪೀಠ, ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
