ಲಖನೌ:ಸರ್ಕಾರದ ಅಧೀನದಲ್ಲಿರುವ ಬಾಲಕಿಯರ ಹಾಸ್ಟೆಲ್​ನಲ್ಲಿ 89 ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ಉತ್ತರಪ್ರದೆಶದ ಗೊಂಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಹಾಸ್ಟೆಲ್​ ಮೇಲೆ ದಾಳಿ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಜಿಲ್ಲೆಯ ಪರಸ್​ಪುರದಲ್ಲಿರುವ ಕಸ್ತೂರ್​ಬಾ ಗಾಂಧಿ ಬಾಲಕಿಯರ ಹಾಸ್ಟೆಲ್​ನಲ್ಲಿ 89 ವಿದ್ಯಾರ್ಥಿನಿಯರು ರಾತ್ರಿ ಹೊತ್ತು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಧಿಕಾರಿ ನೇಹಾ ಶರ್ಮಾ ಆದೇಶದ ಮೇರೆಗೆ ಪೊಲೀಸರು ಹಾಸ್ಟೆಲ್​ ವಾರ್ಡನ್​ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:ರಕ್ಷಾ ಬಂಧನದ ಪ್ರಯುಕ್ತ ದೇಶದ ಪ್ರಮುಖ ನಾಯಕರಿಗೆ ರಾಖಿ ಕಳುಹಿಸಿದ ಸೀಮಾ ಹೈದರ್​
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ನೇಹಾ ಶರ್ಮಾ ಹಾಸ್ಟೆಲ್​ನಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ಇರಬೇಕಿತ್ತು. ಆದರೆ, ನಾವು ಭೇಟ ನೀಡಿದ ವೇಳೆ 11 ವಿದ್ಯಾರ್ಥಿನಿಯರು ಹಾಜರಿದ್ದರು. 89 ವಿದ್ಯಾರ್ಥಿನಿಯರು ಇಲ್ಲದೇ ಇರುವ ಬಗ್ಗ ಕೇಳಿದಾಗ ವಾರ್ಡನ್​ ಸರಿತಾ ಸಿಂಗ್​ ಸಹ ಸಮರ್ಕಪವಾದ ಉತ್ತರ ನೀಡಲಿಲ್ಲ.
ಇದು ಗಂಭೀರ ರೀತಿಯ ನಿರ್ಲಕ್ಷ್ಯವಾಗಿದ್ದು, ಬಾಲಕಿಯರ ಹಾಸ್ಟೆಲ್​ನಲ್ಲಿ ಈ ರೀತಿ ನಡೆದಿರುವುದು ಕಳವಳಕಾರಿಯಾಗಿದೆ. ಘಟನೆ ಸಂಬಂಧ ಮಹಿಳಾ ವಾರ್ಡನ್​ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + seventeen =
Remember me
