ಬೆಂಗಳೂರು:ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಿರುದ್ಧ ಆಕ್ಷೇಪಾರ್ಹ ಟ್ವೀಟ್​ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಐಟಿ ಸೆಲ್​ ಮುಖ್ಯಸ್ಥ ಅಮಿತ್​ ಮಾಳವೀಯಾ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಹಾಗು ವಕೀಲರಾಗಿರುವ ತೇಜಸ್ವಿ ಸೂರ್ಯ ಬುಧವಾರ ಕರ್ನಾಟಕ ಹೈಕೋರ್ಟಿನಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.
ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿದ್ದು, ಅಮಿತ್​ ಮಾಳವೀಯಾ ಪರವಾಗಿ ಸಂಸದ ತೇಜಸ್ವಿ ಸೂರ್ಯ ವಾದ ಮಂಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ತೇಜಸ್ವಿ ಸೂರ್ಯ ದೇಶದ ಜನರ ವರ್ಗಗಳ ನಡುವೆ ದ್ವೇಷವನ್ನು ಉತ್ತೇಜಿಸುವಂಥ ಟ್ವೀಟ್​​ ಅನ್ನು ಮಾಳವೀಯ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಮಾಳವಿಯಾ ವಿರುದ್ಧ ಆರೋಪಿಸಲಾದ ಅಂಶಗಳು ಭಾರತೀಯ ದಂಡಸಂಹಿತೆಯ 153(A) & 505(2) ರ ಅಡಿ ಪ್ರಕರಣ ದಾಖಲಿಸಿಕೊಳ್ಳುವ ವ್ಯಾಪ್ತಿಗೆ ಬರುವುದಿಲ್ಲ ಎಂದು ಕೋರ್ಟ್ ಪರಿಗಣಿಸಿದೆ.
#WATCH| BJP MP & lawyer Tejasvi Surya says, "The High Court of Karnataka, today granted an interim stay on investigation and all further proceedings in the FIR registered against Amit Malviya over an alleged tweet which, the FIR alleged, would promote enmity between classes of…pic.twitter.com/TrX3uTVlOo
ಇದನ್ನೂ ಓದಿ:VIDEO| ನಾವು ಅಲ್ಲಾನನ್ನು ನಂಬಿರುವವರು ವಂದೇ ಮಾತರಂಗೆ ತಲೆಬಾಗಲು ಸಾಧ್ಯವಿಲ್ಲ: SP ಶಾಸಕ
ಹೀಗಾಗಿ ಮುಂದಿನ ತನಿಖೆ ಮತ್ತು ಪ್ರಕ್ರಿಯೆಗಳಿಗೆ ಮಧ್ಯಂತರ ತಡೆ ನೀಡಿದೆ. ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರಾಜಕೀಯ ಪ್ರೇರಿತವಾಗಿದೆ. ರಾಹುಲ್ ಗಾಂಧಿ ವಿರುದ್ಧ ಅವರು ಹೇಳಿಕೆ ನೀಡಿದ್ದಕ್ಕಾಗಿ ಐಪಿಸಿ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೇಲಿನ ಎರಡೂ ಸೆಕ್ಷನ್‌ಗಳು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಬಗ್ಗೆ ವ್ಯವಹರಿಸುತ್ತದೆ.
ಹಾಗಾದರೆ, ರಾಹುಲ್ ಗಾಂಧಿ ಎಂದರೇನು? ಒಬ್ಬ ವ್ಯಕ್ತಿ ಅಥವಾ ಒಂದು ಗುಂಪು ಅಥವಾ ಒಂದು ವರ್ಗವೇ? ನಾವು ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇವೆ ಮತ್ತು ನಮಗೆ ನ್ಯಾಯ ದೊರೆಯಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜೂನ್​ 17ರಂದು ಅಮಿತ್​ ಮಾಳವೀಯಾ ತಮ್ಮ ಟ್ವಿಟರ್​ ಖಾತೆಯಿಂದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಕೋಮು ಸೌಹಾರ್ದತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಬಿತ್ತುವ ಸಲುವಾಗಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ ಎಂದು ಆರೋಪಿಸಿ ಸಚಿವ ಪ್ರಿಯಾಂಕ ಖರ್ಗೆ ದೂರು ದಾಖಲಿಸಿದ್ದರು. ಈ ಸಂಬಂಧ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಯಲ್ಲಿ 153ಎ ಅಡಿಯಲ್ಲಿ FIR ದಾಖಲಿಸಲಾಗಿತ್ತು.
Appeared on behalf of Sri@amitmalviyaat Karnataka HC today in the FIR registered against him for his tweet against Rahul Gandhi.HC granted interim stay holding that allegations in the complaint & FIR does not attract the ingredients of IPC 153(A) & 505(2).At least now,…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 5 =
Remember me
