ಮುಂಬೈ:ಬಾಲಿವುಡ್​ ನಟರಾಗಿದ್ದ ಸುಶಾಂತ್​ ಸಿಂಗ್​ ರಜಪೂತ್​ ಅವರ ಮಾಜಿ ಮ್ಯಾನೇಜರ್​ ದಿಶಾ ಸಾಲಿಯಾನ್​ ಅವರನ್ನು ರೇಪ್​ ಮಾಡಿ ಕೊಲೆ ಮಾಡಲಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ನಾರಾಯಣ್ ರಾಣೆ ಮಂಗಳವಾರ ಆರೋಪಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ದಿಶಾ ಅವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ. ಅದರಲ್ಲಿ ಅವರ ಗುಪ್ತಾಂಗಗಳ ಮೇಲೆ ಗಾಯಗಳಾಗಿದ್ದವು ಎಂದು ಹೇಳಲಾಗಿದೆ ಎಂದು ತಿಳಿಸಿದ್ದಾರೆ.
ದಿಶಾ ಸಾಲಿಯಾನ್​ ಮತ್ತು ಸುಶಾಂತ್​ ಸಿಂಗ್​ ರಜಪೂತ್​ ಅವರ ಸಾವಿನ ಪ್ರಕರಣಗಳ ತಪ್ಪಿತಸ್ಥರನ್ನು ರಕ್ಷಿಸಲು ಮಹಾರಾಷ್ಟ್ರ ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸುವ ಮೂಲಕ ಈ ಪ್ರಕರಣಕ್ಕೆ ರಾಜಕೀಯ ತಿರುವು ದೊರಕಿಸಿಕೊಟ್ಟಿದ್ದಾರೆ.
ಇದನ್ನೂ ಓದಿ:ಬಲಿಪೀಠದಿಂದ ತಪ್ಪಿಸಿಕೊಂಡ ಬೆಕ್ಕು, ಆ ತಪ್ಪಿಗೆ ಮಗುವನ್ನೇ ಬಲಿ ಕೊಡಿ ಎಂದ ಭೂಪ
ಈ ಪ್ರಕರಣಗಳ ತನಿಖೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಇದರಲ್ಲಿ ರಾಜ್ಯ ಸರ್ಕಾರ ಕೂಡ ಭಾಗಿಯಾಗಿದೆ. ದಿಶಾ ಅವರ ಕುಟುಂಬ ವರ್ಗ ಆಕೆಯ ಸಾವಿನ ಬಗ್ಗೆ ತನಿಖೆ ನಡೆಸದಂತೆ ಮನವಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಕಾಣದ ಕೈಗಳ ಒತ್ತಡವೇ ಕಾರಣ ಎಂದು ಆರೋಪಿಸಿದ್ದಾರೆ.
ಬಾಲಿವುಡ್​ ನಟ ಡಿನೋ ಮೋರಿಯಾ ಅವರ ಮನೆಯಲ್ಲಿ ಜೂ.13ರಂದು ಪಾರ್ಟಿ ಆಯೋಜನೆಗೊಂಡಿತ್ತು. ಈ ಪಾರ್ಟಿಯಲ್ಲಿ ರಾಜಕಾರಣಿಯೊಬ್ಬರು ಪಾಲ್ಗೊಂಡಿದ್ದರು. ಪಾರ್ಟಿ ಮುಗಿದ ಬಳಿಕ ಎಲ್ಲರೂ ಸುಶಾಂತ್​ ಸಿಂಗ್​ ರಜಪೂತ್​ ಮನೆಗೆ ಹೋಗಿದ್ದರು ಎಂದು ಹೇಳಿದ್ದಾರೆ.
ಯುಪಿಎಸ್​ಸಿ ಪರೀಕ್ಷೆ- 2019 ಫಲಿತಾಂಶ ಪ್ರಕಟ; ಕರ್ನಾಟಕದ 38 ಅಭ್ಯರ್ಥಿಗಳು ಪಾಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
