ಮುಂಬೈ:ಬಾಲಿವುಡ್​ ನಟಿ ರಿಯಾ ಚಕ್ರವರ್ತಿ ಅವರಿಂದ ತಮ್ಮ ಜೀವಕ್ಕೆ ಅಪಾಯ ಒದಗಬಹುದು ಎಂದು ನಟ ಸುಶಾಂತ್​ ಸಿಂಗ್​ ರಜಪೂತ್​ ತಮ್ಮ ಕುಟುಂಬದ ಸದಸ್ಯರಿಗೆ ತಿಳಿಸಿದ್ದರು ಎಂದು ಹೇಳಲಾಗಿದೆ.
ಈ ವರ್ಷದ ಫೆಬ್ರವತಿ 25ರಂದು ಬಾಂದ್ರಾ ಪೊಲೀಸ್​ ಠಾಣೆಗೆ ಹೋಗಿದ್ದ ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ ಸದಸ್ಯರು ಸುಶಾಂತ್​ ಅವರು ಒಳ್ಳೆಯವರೊಂದಿಗೆ ಒಡನಾಟ ಹೊಂದಿಲ್ಲ. ದಯವಿಟ್ಟು ಅವರಿಗೆ ಏನೂ ಆಪಾಯವಾಗದಂತೆ ನೋಡಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಆ ಸಂದರ್ಭದಲ್ಲಿ ಸುಶಾಂತ್​ ಸಂಪೂರ್ಣ ರಿಯಾ ಅವರ ಹಿಡಿತದಲ್ಲಿದ್ದರು ಎಂದು ಸುಶಾಂತ್​ ಸಿಂಗ್​ ರಜಪೂತ್​ ಅವರು ಕುಟುಂಬದ ಪರ ವಕೀಲ ವಿಕಾಸ್​ ಸಿಂಗ್​ ಹೇಳಿದ್ದಾರೆ.
ಈ ವಿಚಾರವಾಗಿ ನಾವು ರಿಯಾ ಅವರ ವಿರುದ್ಧ ದೂರು ಕೊಡಲು ಹೋದಾಗ ಬಿಹಾರ ಪೊಲೀಸರು ಎಫ್​ಐಆರ್​ ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ, ಸಿಎಂ ನಿತೀಶ್​ ಕುಮಾರ್​ ಮಧ್ಯಪ್ರವೇಶಿಸಿದ ಬಳಿಕ ಎಫ್​ಐಆರ್​ ದಾಖಲಿಸಿಕೊಂಡಿದ್ದಾಗಿ ಹೇಳಿದ್ದಾರೆ.ತಕ್ಷಣವೇ ಬಂಧಿಸಿ: ಸುಶಾಂತ್​ ಸಿಂಗ್​ ರಜಪೂತ್​ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟಿ ರಿಯಾ ಚಕ್ರವರ್ತಿ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ವಿಕಾಸ್​ ಕುಮಾರ್​ ಆಗ್ರಹಿಸಿದರು. ಆಕೆಯನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ ಮಾತ್ರ ಸತ್ಯ ಹೊರಬರಲು ಸಾದ್ಯ ಎಂದು ಹೇಳಿದರು.
ಇದನ್ನೂ ಓದಿ:ಅನಾಥ ಜೀಬ್ರಾದ ಮರಿಗೆ ಈತನೇ ‘ಅಮ್ಮ’- ಅದಕ್ಕಾಗಿಯೇ ಈ ವೇಷ…
ರಿಯಾ ಅವರು ಸುಶಾಂತ್​ ಸಿಂಗ್​ ರಜಪೂತ್​ ಅವರನ್ನು ಅವರ ಕುಟುಂಬದಿಂದ ದೂರ ಮಾಡಿದ್ದರು. ಕನಿಷ್ಠ ತಮ್ಮ ತಂದೆ ಅಥವಾ ತಮ್ಮ ಕುಟುಂಬದ ಸದಸ್ಯರ ಜತೆ ಮಾತನಾಡುವ ಸ್ವಾತಂತ್ರ್ಯವೂ ಅವರಿಗೆ ಇಲ್ಲವಾಗಿತ್ತು ಎಂದು ಪ್ರತಿಪಾದಿಸಿದರು.
ಮುಂಬೈ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ವಿಕಾಸ್​ ಸಿಂಗ್​, ಮುಂಬೈ ಪೊಲೀಸರು ಬೇರೊಂದು ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ಸುಶಾಂತ್​ ಆತ್ಮಹತ್ಯೆಗೆ ಪರೋಕ್ಷವಾಗಿ ಕಾರಣದವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಆದರೆ, ಅವರು ಈ ವಿಷಯವಾಗಿ ರಿಯಾ ಚಕ್ರವರ್ತಿ ಅವರನ್ನು ತನಿಖೆಗೆ ಒಳಪಡಿಸಲು ಹಿಂದೇಟು ಹಾಕುತ್ತಿದ್ದಾರೆ. ಹಾಗಾಗಿ ನಾವು ರಿಯಾ ವಿರುದ್ಧ ಪಟನಾದಲ್ಲಿ ದೂರು ದಾಖಲಿಸಬೇಕಾಯಿತು ಎಂದು ಸಮಜಾಯಿಷಿ ನೀಡಿದರು.
ಉತ್ತಮ ಆಡಳಿತ ವ್ಯವಸ್ಥೆ-ನಿರ್ವಹಣೆ ಶಾಲೆಗಳಿಗೆ ಸಿಗಲಿದೆ ರಾಜ್ಯಮಟ್ಟದ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + thirteen =
Remember me
