ಪಟನಾ:ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಸಾವು ಸಂಭವಿಸಿದ ದಿನದಿಂದ ಈ ಪ್ರಕರಣ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇದೆ. ಮುಂಬೈ ಪೊಲೀಸರು ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಅಧಿಕ ಜನರನ್ನು ವಿಚಾರಣೆ ನಡೆಸಿದ್ದಾರೆ.
ಸುಶಾಂತ್​ ಸಿಂಗ್​ ಸಾವು ಆತ್ಮಹತ್ಯೆಯಿಂದಲೇ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ಹೀಗಿದ್ದರೂ ಚಿತ್ರೋದ್ಯಮದ ಹಲವು ಗಣ್ಯರು, ರಾಜಕಾರಣಿಗಳು ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದಾರೆ.
ಇದನ್ನೂ ಓದಿ;ನಟ ಸುಶಾಂತ್​ ಸಿಂಗ್​ ರಜಪೂತ್​ ತಿಂಗಳಿಗೆಷ್ಟು ಖರ್ಚು ಮಾಡುತ್ತಿದ್ದರು? ಹಳೇ ಮ್ಯಾನೇಜರ್​ ನೀಡಿದ್ದಾರೆ ಪೊಲೀಸರಿಗೆ ಮಾಹಿತಿ
ಇದೀಗ ಸುಶಾಂತ್​ ಸಿಂಗ್​ ತಂದೆ ಕೆ.ಕೆ. ಸಿಂಗ್​ ಕೂಡ ಕೇಸ್​ಅನ್ನು ಸಿಬಿಐಗೆ ವಹಿಸಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇಷ್ಟು ದಿನ ಮೌನವಾಗಿದ್ದ ಅವರಿಗೆ ಸುಶಾಂತ್​ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ನನ್ನ ಮಗನ ಆತ್ಮ ಪರಿತಪಿಸುತ್ತಿದೆ. ಸಿಬಿಐ ತನಿಖೆಗಾಗಿ ಒತ್ತಾಯಿಸುತ್ತಿದೆ ಎಂದು ಟ್ವೀಟ್​ ಮಾಡಿದ್ದಾರೆ.
ಸುಶಾಂತ್​ ಸಿಂಗ್​ ಧೈರ್ಯಶಾಲಿ. ಆತ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ ಎಂಬುದು ನನಗೆ ತಿಳಿದಿದೆ. ಆತನ ಸಾವು ಕೊಲೆಯಾಗಿದ್ದರೂ ಆತ್ಮಹತ್ಯೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ. ಹೀಗಾಗಿ ಈ ಪ್ರಕರಣದ ಸಂಪೂರ್ಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಮನವಿ ಮಾಡುವುದಾಗಿ ಇನ್ನೊಂದು ಟ್ವಿಟ್​ನಲ್ಲಿ ಹೇಳಿದ್ದಾರೆ.
ಇದನ್ನೂ ಓದಿ;ಮದುವೆಗೆ ಸಜ್ಜಾಗುತ್ತಿದ್ದ ಸುಶಾಂತ್​ ಸಿಂಗ್​; ಹೊಸ ಮನೆ ಹುಡುಕಾಟದಲ್ಲಿದ್ದ ಗೆಳತಿ; ನಿಗೂಢವಾಗುತ್ತಿದೆ ಆತ್ಮಹತ್ಯೆ ಕಾರಣ
ಸುಶಾಂತ್​ ಸಿಂಗ್​ ಸಾವು ಜೂ.14ರಂದು ಸಂಭವಿಸಿತ್ತು. ಮುಂಬೈನ ಬಾಂದ್ರಾದ ಮನೆಯಲ್ಲಿ ನೇಣು ಹಾಕಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು.
ಸುಶಾಂತ್​ ಆತ್ಮಹತ್ಯೆಯ ಮೊದಲ ಯತ್ನ ಫಲಿಸಿರಲಿಲ್ಲ…! ಅಲ್ಲಿಗೆ ನಿಂತಿದ್ದರೆ ಬದುಕಿರುತ್ತಿದ್ದರೇ ಬಾಲಿವುಡ್​ ನಟ…?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eight + ten =
Remember me
