ನವದೆಹಲಿ:ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ (72) ಅವರು ಸೋಮವಾರ ನಿಧನರಾಗಿದ್ದಾರೆ. ಅವರು ಇಂದು ಸಂಜೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇದನ್ನೂ ಓದಿ:ವಾರಣಾಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ, ನಾಳೆ ನಾಮಪತ್ರ ಸಲ್ಲಿಕೆ!
ಕ್ಯಾನರ್​ನಿಂದ ಬಳಲುತ್ತಿದ್ದ ಅವರು ಅನಾರೋಗ್ಯದ ಕಾರಣ ನೀಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಫರ್ಧೆಯಿಂದ ಹಿಂದೆ ಸರಿದಿದ್ದರು. ಕಳೆದ ಒಂದು ತಿಂಗಳಿನಿಂದ ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಈ ಬಗ್ಗೆ ಬಿಹಾರದ ಉಪ ಮುಖ್ಯಮಂತ್ರಿ ಸಾಮ್ರಾಟ್​ ಚೌದರಿ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಮಾಡಿ ಅವರ ನಿಧನದ ಬಗ್ಗೆ ಸ್ಪಷ್ಟಪಡಿಸಿದ್ದಾರೆ.ಸುಶೀಲ್ ಕುಮಾರ್ ಮೋದಿ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ತಿಳಿದು ಬಂದಿದೆ.
ʼ6 ತಿಂಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದೇನೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಈ ಹಿಂದೆಯೇ ಎಂದು ಹೇಳಿದ್ದರು.
पिछले 6 माह से कैंसर से संघर्ष कर रहा हूँ । अब लगा कि लोगों को बताने का समय आ गया है । लोक सभा चुनाव में कुछ कर नहीं पाऊँगा ।PM को सब कुछ बता दिया है ।देश, बिहार और पार्टी का सदा आभार और सदैव समर्पित |
— Sushil Kumar Modi (मोदी का परिवार ) (@SushilModi)April 3, 2024

“ಈಗ ಜನರಿಗೆ ನನ್ನ ಆರೋಗ್ಯದ ಬಗ್ಗೆ ಹೇಳುವ ಸಮಯ ಬಂದಿದೆ ಎಂದು ನಾನು ಭಾವಿಸಿದ್ದೇನೆ. ಹೀಗಾಗಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಚಾರವನ್ನು ತಿಳಿಸುತ್ತಿದ್ದೇನೆ. ನನ್ನ ಆರೋಗ್ಯಕ್ಕೆ ಸಂಬಂಧಿಸಿದ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಹಂಚಿಕೊಂಡಿದ್ದೇನೆ. ದೇಶಕ್ಕೆ, ಬಿಹಾರ ಮತ್ತು ಬಿಜೆಪಿಗೆ ಯಾವಾಗಲೂ ಕೃತಜ್ಞನಾಗಿರುತ್ತೇನೆ ಮತ್ತು ಸಮರ್ಪಿತರಾಗಿರುತ್ತೇನೆ” ಎಂದು 72 ವರ್ಷದ ಸುಶೀಲ್ ಮೋದಿ ಬರೆದುಕೊಂಡಿದ್ದರು.
ಸರ್ವಾಧಿಕಾರಿಯ ಮತ್ತೊಂದು ವಿಚಿತ್ರ ಆದೇಶ: ಉತ್ತರ ಕೊರಿಯಾದಲ್ಲಿ ರೆಡ್​ ಲಿಪ್​ಸ್ಟಿಕ್ ಬ್ಯಾನ್! ನಿಯಮ ಉಲ್ಲಂಘಿಸಿದರೆ…?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
