ನವದೆಹಲಿ:ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಸುಶ್ಮಿತಾ ಸೇನ್ ಅವರು ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸುಶ್ಮಿತಾ ಸೇನ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಈ ವಿಚಾರ ಬಹಿರಂಗವಾಗುತ್ತಿದ್ದಂತೆ, ಅವರ ಅಭಿಮಾನಿಗಳು ಬೇಗನೆ ಗುಣಮುಖರಾಗುವಂತೆ ಹಾರೈಸಿದ್ದಾರೆ.
47 ವರ್ಷದ ಸುಶ್ಮಿತಾ ಸೇನ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದು, ಸ್ಟಂಟ್ ಅಳವಡಿಸಲಾಗಿದೆ. ಸದ್ಯ ಅಪಾಯದಿಂದ ಪಾರಾಗಿದ್ದಾರೆ. ತನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೆ ಇದೀಗ ಧನ್ಯವಾದ ತಿಳಿಸಿದ್ದಾರೆ.
ನಿಮ್ಮ ಹೃದಯವನ್ನುಸದಾ ಸಂತೋಷದಿಂದ ಹಾಗು ಧೈರ್ಯದಿಂದ ಇರುವಂತೆ ನೋಡಿಕೊಳ್ಳಿ. ಹೀಗಿದ್ದಾಗ ಮಾತ್ರ ಅಗತ್ಯದ ಸಂದರ್ಭದಲ್ಲಿ ಹೃದಯ ನಿಮ್ಮೊಂದಿಗೆ ನಿಲ್ಲುತ್ತದೆ. ಒಂದೆರಡು ದಿನಗಳ ಹಿಂದೆ ನನಗೆ ಹೃದಯಾಘಾತ ಸಂಭವಿಸಿದೆ. ಆಂಜಿಯೋಪ್ಲಾಸ್ಟಿ ಮಾಡಲಾಗಿದ್ದು, ‘ನನಗೆ ದೊಡ್ಡ ಹೃದಯವಿದೆ’ ಎಂಬುದನ್ನು ವೈದ್ಯರು ಹೇಳಿದ್ದಾರೆ. ಮತ್ತೆ ಜೀವನ ಸಾಗಿಸಲು ಸಿದ್ಧಳಾಗಿದ್ದೇನೆ ಎಂದು ಸುಶ್ಮಿತಾ ಸೇನ್ ತಮ್ಮ ಇನ್ಸ್​ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.(ಏಜೆನ್ಸೀಸ್)
ಇದನ್ನೂ ಓದಿ:Success Story | ನಾನು UPSC ಪರೀಕ್ಷೆ ಬರೆದಾಗ 9 ತಿಂಗಳ ಗರ್ಭಿಣಿ; ಮೊದಲ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
