ಚೆನ್ನೈ:ಭಾನುವಾರ ನಡೆದ ಆಡಳಿತಾರೂಢ ಡಿಎಂಕೆ ಪಕ್ಷದ ಸಮಾರಂಭದಲ್ಲಿ ಕರ್ತವ್ಯನಿರತ ಮಹಿಳಾ ಕಾನ್ಸ್​ಟೇಬಲ್​ಗೆ ಲೈಂಗಿಕ ಕಿರುಕುಳ ನೀಡಿದ ಇಬ್ಬರು ಡಿಎಂಕೆ ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಇದರ ಬೆನ್ನಲ್ಲೇ ಮಂಗಳವಾರ ರಾತ್ರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಸಂಧಾನದ ಬಳಿಕ ಇಬ್ಬರನ್ನು ಬಿಡುಗಡೆ ಮಾಡಲಾಗಿದೆ.
ಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ಕೆ. ಅನ್ಬಳಗನ್ ಅವರ ಶತಮಾನೋತ್ಸವದ ಆಚರಣೆಯ ಅಂಗವಾಗಿ 2023ರ ಜನವರಿ 1 ರಂದು ಸಂಜೆ ವಿರುಗಂಬಕ್ಕಂನ ದಶರಥಪುರಂನಲ್ಲಿ ಸಾರ್ವಜನಿಕ ಸಭೆ ನಡೆಯಿತು. ಡಿಎಂಕೆ ಸಂಸದರಾದ ಕನಿಮೋಳಿ ಮತ್ತು ತಮಿಳಚಿ ತಂಗಪಾಂಡಿಯನ್ ಮತ್ತು ವಿರುಗಂಬಕ್ಕಂ ಶಾಸಕ ಪ್ರಭಾಕರ್ ರಾಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಜನಜಂಗುಳಿ ನಿಯಂತ್ರಿಸುತ್ತಿದ್ದ ಮಹಿಳಾ ಕಾನ್ಸ್​ಟೇಬಲ್​ ಮೇಲೆ ಇಬ್ಬರು ಕಾರ್ಯಕರ್ತರಾದ ಏಕಂಬರಂ ಮತ್ತು ಪ್ರವೀಣ್​ ದೌರ್ಜನ್ಯ ನಡೆಸಿದ್ದರು. ಈ ವೇಳೆ ಕಾನ್ಸ್​ಟೇಬಲ್​ ಕೇಶವನ್​ ಎಂಬುವರು ಮಧ್ಯಪ್ರವೇಶಿಸಿ ಮಹಿಳಾ ಕಾನ್ಸ್​ಟೇಬಲ್​ನನ್ನು ರಕ್ಷಣೆ ಮಾಡಿದ್ದರು. ಈ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಒಬ್ಬನನ್ನು ಹಿಡಿದುಕೊಂಡಿದ್ದರು. ತದನಂತರದಲ್ಲಿ ಮತ್ತೊಬ್ಬ ಆರೋಪಿಯನ್ನೂ ಬಂಧಿಸಲಾಯಿತು. ಇಬ್ಬರು ಡಿಎಂಕೆ ಕಾರ್ಯಕರ್ತರು ಪಾನಮತ್ತರಾಗಿ ಈ ಕೃತ್ಯ ಎಸಗಿದ್ದರು.
ಇಬ್ಬರು ಆರೋಪಿಗಳನ್ನು ಪೊಲೀಸರು ಠಾಣೆಗೆ ಕರೆದೊಯ್ಯಲು ಪ್ರಯತ್ನಿಸಿದಾಗ, ಶಾಸಕರು ಮಧ್ಯಪ್ರವೇಶಿಸಿ, ಸಂಧಾನ ಮಾಡಿಕೊಂಡರು. ಸದ್ಯ ಇಬ್ಬರು ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮಹಿಳಾ ಕಾನ್ಸ್​ಟೇಬಲ್​ ದೂರನ್ನು ಹಿಂಪಡೆದುಕೊಂಡಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಧಾನದಿಂದ ಅಂತ್ಯ ಕಂಡಿದೆ.(ಏಜೆನ್ಸೀಸ್​)
ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಟೆಕ್ಕಿಯ ಮೇಲೆ ಹರಿದ ಟ್ರಕ್: ತಮ್ಮನ ಎದುರೇ ಅಕ್ಕನ ದುರಂತ ಸಾವು

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣ: ಮೂವರು ಯುವತಿಯರು ಸೇರಿ ನಾಲ್ವರ ಬಂಧನ

ಈ 2 ಪಕ್ಷಗಳ ಬಗ್ಗೆ ಮುಸ್ಲಿಮರಿಗೆ ಎಚ್ಚರವಿರಲಿ… ಮುಂದಿನ ಲೋಕಸಭಾ ಚುನಾವಣೆಗೆ ಬಿಹಾರ ಸಿಎಂ ಹೊಸ ತಂತ್ರಗಾರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
