ಕೊಲ್ಕತಾ :ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಿಂದ ಸ್ಪರ್ಧಿಸಲು ಟಿಎಂಸಿ ನಾಯಕಿ ಮತ್ತು ಸಿಎಂ ಮಮತಾ ಬ್ಯಾನರ್ಜಿ ಸಲ್ಲಿಸಿರುವ ನಾಮಪತ್ರಕ್ಕೆ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಆಕ್ಷೇಪ ಸಲ್ಲಿಸಿದ್ದಾರೆ. ಬ್ಯಾನರ್ಜಿ ಅವರು ತಮ್ಮ ವಿರುದ್ಧ ಇರುವ 6 ಕ್ರಿಮಿನಲ್ ಪ್ರಕರಣಗಳನ್ನು ಮರೆಮಾಚಿದ್ದಾರೆ ಎಂದು ಇತ್ತೀಚೆಗೆ ಟಿಎಂಸಿಯಿಂದ ಬಿಜೆಪಿ ಸೇರಿದ ಅಧಿಕಾರಿ, ಆರೋಪಿಸಿದ್ದಾರೆ.
“ಬ್ಯಾನರ್ಜಿ ಅವರು ಟಿಎಂಸಿ ಅಭ್ಯರ್ಥಿಯಾಗಿ ಸಲ್ಲಿಸಿರುವ ಅಫಿಡೆವಿಟ್​ನಲ್ಲಿ ಅವರ ವಿರುದ್ಧ ಇರುವ ಆರು ಕ್ರಿಮಿನಲ್ ಮೊಕದ್ದಮೆಗಳ ಬಗ್ಗೆ ತಿಳಿಸಿಲ್ಲ. ಅಸ್ಸಾಂನಲ್ಲಿ 2018 ರಲ್ಲಿ ದಾಖಲಾಗಿರುವ ಐದು ಎಫ್​.ಐ.ಆರ್.ಗಳು ಮತ್ತು ಒಂದು ಸಿಬಿಐ ಎಫ್​.ಐ.ಆರ್​. ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ” ಎಂದಿರುವ ಅಧಿಕಾರಿ, ಈ ಬಗ್ಗೆ ಎಲ್ಲ ಪುರಾವೆಗಳನ್ನು ಒದಗಿಸಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:ಕ್ರಿಕೆಟ್ ಆಟಗಾರನಂತೆ ಮೈದಾನಕ್ಕೆ ಹೋಗುತ್ತಿದ್ದ… ಆದರೆ ಮಾಡುತ್ತಿದ್ದುದು ಬೇರೆಯೇ ಕೆಲಸ !
ಟಿಎಂಸಿಯ ಹಿರಿಯ ನಾಯಕರಾಗಿದ್ದ ಸುವೇಂದು ಅಧಿಕಾರಿ, ಕಳೆದ ಡಿಸೆಂಬರ್​ನಲ್ಲಿ ಬಿಜೆಪಿ ಸೇರಿದ್ದರು. ಈಗ ಬಿಜೆಪಿಯು ಅವರನ್ನು ನಂದೀಗ್ರಾಮದ ಅಭ್ಯರ್ಥಿಯಾಗಿ ಬ್ಯಾನರ್ಜಿ ವಿರುದ್ಧ ಕಣಕ್ಕಿಳಿಸಿದೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅಧಿಕಾರಿ, “ಮೋದಿಜಿ ಆಗಲಿ, ಮಮತಾ ಜಿ ಆಗಲಿ, ನಾನಾಗಲಿ – ಎಲ್ಲರಿಗೂ ನಿಯಮಗಳು ಒಂದೇ. ನಾನು ಎಲ್ಲಾ ಪುರಾವೆ ಒದಗಿಸಿ ನನ್ನ ಕರ್ತವ್ಯ ಮಾಡಿದ್ದೇನೆ. ಚುನಾವಣಾ ಆಯೋಗವು ಇದನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳುತ್ತದೆ ಎಂದು ನಂಬಿದ್ದೇನೆ” ಎಂದರು.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

“ಪೆಟ್ಟು ಬಿದ್ದ ಹುಲಿ ಹೆಚ್ಚು ಅಪಾಯಕಾರಿ” : ಮಮತಾ ಬ್ಯಾನರ್ಜಿ ಎಚ್ಚರಿಕೆ
ಕರೊನಾ ನಿಯಮ ಉಲ್ಲಂಘನೆ : ಬಾಲಿವುಡ್ ನಟಿ ವಿರುದ್ಧ ಮುಂಬೈ ಪಾಲಿಕೆ ದೂರು
“ನನ್ನ ಹೆಲಿಕಾಪ್ಟರ್ ಕೆಟ್ಟಿತ್ತು… ಆದರೆ ನಾನದನ್ನು ಸಂಚು ಎನ್ನುವುದಿಲ್ಲ…”


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
