ಬೆಂಗಳೂರು:ಸರ್ಕಾರಿ ಶಾಲೆಗಳಲ್ಲಿನ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಶೈಕ್ಷಣಿಕ ನಿರ್ವಹಣೆಯಲ್ಲಿನ ವಿಶೇಷ ಸಾಧನೆ ಗುರುತಿಸಿ ಈ ವರ್ಷದಿಂದಲೇ ರಾಜ್ಯಮಟ್ಟದಲ್ಲಿ ‘ಸ್ವಾಭಿಮಾನಿ ಸರ್ಕಾರಿ ಶಾಲೆ’ ಎಂಬ ಪ್ರಶಸ್ತಿಯನ್ನು ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್ ಹೇಳಿದ್ದಾರೆ.
ಕರೊನಾ ಸಂಕಷ್ಟದ ಸಂದರ್ಭದಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣದ ಮೂಲಕ ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಬುಧವಾರ ರಾಜ್ಯದ ಸರ್ಕಾರಿ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಈ ವಿಷಯ ಪ್ರಕಟಿಸಿದರು.
ಶಾಲೆಯಲ್ಲಿರುವ ಮೂಲಸೌಲಭ್ಯಗಳು, ಶೈಕ್ಷಣಿಕ ಪ್ರಗತಿ, ಸಮುದಾಯದ ಸಹಭಾಗಿತ್ವ, ಶಾಲೆಗಳ ಸರ್ವಾಂಗೀಣ ಪ್ರಗತಿಯಲ್ಲಿ ಎಸ್‍ಡಿಎಂಸಿ-ಶಿಕ್ಷಕರ ಅನ್ಯೋನ್ಯ ಸಂಬಂಧಗಳು ಸೇರಿ ಹಲವು ಆಯಾಮಗಳಲ್ಲಿ ನಮ್ಮ ಸರ್ಕಾರಿ ಶಾಲೆಗಳ ಗುಣಮಟ್ಟ ಅಳೆದು ಈ ಸಾಲಿನಿಂದಲೇ ಸಾಧನೆ ಗುರುತಿಸಲಾಗುವುದು ಎಂದರು.
ಇದನ್ನೂ ಓದಿ;ನಾಲ್ಕು ವರ್ಷದ ಬಾಲಕವಿ; ಕವನ ಸಂಕಲನಕ್ಕೆ ಒಪ್ಪಂದ ಮಾಡಿಕೊಂಡ ಇಂಗ್ಲೆಂಡ್​ನ ಪ್ರತಿಷ್ಠಿತ ಪ್ರಕಾಶನ ಸಂಸ್ಥೆ
ಅದೇ ರೀತಿ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪಡೆದ ಶಿಕ್ಷಕರ ನವೀನ ಶೈಕ್ಷಣಿಕ ಪ್ರಯೋಗಗಳನ್ನು ಗುರುತಿಸಿ ವಿದ್ಯಾರ್ಥಿಗಳ ಕಲಿಕೆಯಲ್ಲಿ ಸೃಜನಶೀಲತೆ ಬೆಳೆಸಲು ಪ್ರೇರೇಪಿಸುವ ಅತ್ಯುತ್ತಮ ಯೋಜನೆಯನ್ನು ಸಹ ಈ ಸಾಲಿನಿಂದ ಜಾರಿಗೆ ತರಲಾಗುತ್ತಿದೆ. ನಮ್ಮಲ್ಲಿ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿರುವ ಶಿಕ್ಷಕರ ಸೇವೆ ಗುರುತಿಸಿ ವಿದ್ಯಾರ್ಥಿಗಳ ಕಲಿಕೆಗೆ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ. ನಮ್ಮಲ್ಲಿ ಒಂದು ಧನಾತ್ಮಕ, ಸ್ಪರ್ಧಾತ್ಮಕ ಸ್ಪೂರ್ತಿ ಮೂಡಿದಲ್ಲಿ ಕರೊನಾದಂಥ ಸಂಕಷ್ಟದ ಸಮಯವನ್ನು ಸಮರ್ಥವಾಗಿ ದಾಟಬಹುದು ಎಂದು ಸಚಿವರು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಮಕ್ಕಳ ಭವಿಷ್ಯವನ್ನು ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿಗಳು ರೂಪಿಸುವುದರಲ್ಲಿ ಪ್ರಧಾನ ಪಾತ್ರ ವಹಿಸುತ್ತವೆ. ಸ್ಥಳೀಯವಾಗಿ ಯಾವುದೇ ನಾವಿನ್ಯ ಬೋಧನಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸರ್ಕಾರದ ಸ್ವಾಗತವಿದೆ. ಅನುದಾನ ಲಭ್ಯತೆಯ ಇತಿಮಿತಿಯಲ್ಲಿ ಎಸ್​ಡಿಎಂಸಿಗಳ ಸಬಲೀಕರಣಕ್ಕಾಗಿ ಸರ್ಕಾರವು ಪ್ರಾಮಾಣಿಕ ಕ್ರಮಗಳನ್ನು ಜಾರಿಯಲ್ಲಿಡುತ್ತದೆ ಎಂದೂ ಸುರೇಶ್ ಕುಮಾರ್ ಹೇಳಿದರು.
ಇದನ್ನೂ ಓದಿ;ಶುಕ್ರವಾರ ನಿರ್ಧಾರವಾಗುತ್ತಾ ಅಂತಿಮ ಪರೀಕ್ಷೆ ಹಣೆಬರಹ? ಸುಪ್ರೀಂ ಕೋರ್ಟ್​​ ಹೇಳಿದ್ದೇನು?
ಮಕ್ಕಳ ಕಲಿಕೆಯ ನಿರಂತರತೆಗೆ ವಠಾರ ಶಾಲೆ, ಪಡಸಾಲೆ ಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಖಾಸಗಿ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದ ಎಸ್‍ಡಿಎಂಸಿಗಳ ಬಹುತೇಕ ಸದಸ್ಯರು ಹೆಚ್ಚಿನ ಕಾಲ ಶಾಲೆಗಳನ್ನು ಮುಚ್ಚುವುದರಿಂದ ಮಕ್ಕಳು ಶೈಕ್ಷಣಿಕ ವಾತಾವರಣದಿಂದ ವಿಮುಖವಾಗುವ ಸಾಧ್ಯತೆಯಿದ್ದು, ಸಾಧ್ಯವಾದಷ್ಟು ಬೇಗ ಮಕ್ಕಳನ್ನು ಕಲಿಕೆಗೆ ತೊಡಗಿಸುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಸಂವಾದದಲ್ಲಿ ಹಿರಿಯ ಶಿಕ್ಷಣ ತಜ್ಞ ಡಾ. ವಿ.ಪಿ. ನಿರಂಜನಾರಾಧ್ಯ, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾಧಿಕಾರಿ ದೀಪಾ ಚೋಳನ್ ಭಾಗವಹಿಸಿದ್ದರು.
ಸೆಪ್ಟಂಬರ್​ 5ರಂದು ಶಾಲಾ- ಕಾಲೇಜುಗಳ ಮರು ಆರಂಭ; ಎಲ್ಲಿ? ಯಾರು ಹೇಳಿದ್ದು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
