ಲಖನೌ:ಭಾರತ ಎಂದಿಗೂ ಹಿಂದೂ ರಾಷ್ಟ್ರವಲ್ಲ ಮತ್ತು ಎಂದಿಗೂ ಹಿಂದೂ ರಾಷ್ಟ್ರವಾಗಿರಲಿಲ್ಲ ಎಂದು ಸಮಾಜವಾದಿ ಪಕ್ಷದ ನಾಯಕ, ಉತ್ತರಪ್ರದೇಶ ಸರ್ಕಾರದ ಮಾಜಿ ಸಚಿವ ಸ್ವಾಮಿ ಪ್ರಸಾದ್​ ಮೌರ್ಯ ಹೇಳಿದ್ದಾರೆ.
ಇತ್ತೀಚಿಗೆ ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಭಾರತ ಹಿಂದೂ ರಾಷ್ಟ್ರವಾಗಿದ್ದು, ಎಲ್ಲಾ ಭಾರತೀಯರು ಹಿಂದೂಗಳನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದರು.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಅವರು ನಮ್ಮ ದೇಶದ ಸಂವಿಧಾನವು ಜಾತ್ಯಾತೀತ ರಾಷ್ಟ್ರದ ಪರಿಕಲ್ಷನೆಯಲ್ಲಿ ರಚಿಸಲಾಗಿದೆ. ಭಾರತದಲ್ಲಿರುವ ಎಲ್ಲರೂ ಭಾರತೀಯರು. ನಮ್ಮ ದೇಶದ ಸಂವಿಧಾನವು ಎಲ್ಲಾ ಜಾತಿ, ಧರ್ಮ, ಪಂಗಡ ಮತ್ತು ಸಂಸ್ಕೃತಿಯನ್ನು ಪ್ರತಿನಿಧಿಸುತ್ತದೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
भारत हिंदू राष्ट्र नही है, पूर्व में भी कभी हिंदू राष्ट्र नहीं था। भारत अपने आप में एक संप्रभु राष्ट्र है। हमारा संविधान पंथ निरपेक्ष राष्ट्र की अवधारणा पर आधारित है। भारत के सभी लोग भारतीय हैं। सभी धर्मों, पंथो, सम्प्रदायों व संस्कृतियों का प्रतिनिधित्व हमारा भारतीय संविधान करता…pic.twitter.com/rBhGNTRPPC
ಇದನ್ನೂ ಓದಿ:ಗದರ್​-2 ಚಿತ್ರಕ್ಕೆ ಆಸ್ಕರ್​ ಪ್ರಶಸ್ತಿ ಪಡೆದುಕೊಳ್ಳುವ ಎಲ್ಲಾ ಅರ್ಹತೆಗಳಿವೆ: ನಿರ್ದೇಶಕ ಅನಿಲ್​ ಶರ್ಮಾ
2017ರಿಂದ 22ರವರೆಗೆ ಯೋಗಿ ಆದಿತ್ಯನಾಥ್​ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಸ್ವಾಮಿಪ್ರಸಾದ್​ ಮೌರ್ಯ ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಎಸ್​ಪಿ ಸೇರ್ಪಡೆಯಾಗಿದ್ದರು. ಎಸ್​ಪಿಯಿಂದ ಸ್ಪರ್ಧಿಸಿದ್ದ ಅವರು ಹೀನಾಯವಾಗಿ ಸೋಲುಂಡಿದ್ದರು.
ಭಾರತ ಹಿಂದೂ ರಾಷ್ಟ್ರ ಮತ್ತು ಈ ವಿಚಾರ ಸತ್ಯ. ಸೈದ್ಧಾಂತಿಕವಾಗಿ ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳೆಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿರುವವರು ಹಿಂದೂ ಭೂಮಿ ಮತ್ತು ಸಂಸ್ಕೃತಿಗೆ ಸಂಬಂಧಿಸಿದವರು. ಇವುಗಳನ್ನೂ ಹೊರತುಪಡಿಸಿ ಬೇರೇನು ಇಲ್ಲ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
