ನವದೆಹಲಿ:ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿದ ಮಧ್ಯಂತರ ಬಜೆಟ್​ ಎಲ್ಲರನ್ನು ಒಳಗೊಳ್ಳುವ ಮತ್ತು ಹೊಸತನದ ಬಜೆಟ್​ ಆಗಿದೆ ಎಂದು ಪ್ರಧಾನಿ ಮೋದಿ ಅವರು ಪ್ರಶಂಸಿಸಿದರು.
ಬಜೆಟ್​ ಮಂಡನೆ ಬೆನ್ನಲ್ಲೇ ಅಭಿಪ್ರಾಯ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ಇಂದಿನ ಬಜೆಟ್​ ವಿಕಸಿತ ಭಾರತದ ನಾಲ್ಕು ಆಧಾರಸ್ತಂಭಗಳಾದ ಯುವಕರು, ಬಡವರು, ಮಹಿಳೆಯರು ಮತ್ತು ರೈತರನ್ನು ಸಬಲೀಕರಣಗೊಳಿಸಲಿದೆ. ಅಲ್ಲದೆ, ಈ ಬಜೆಟ್ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ನೀಡುತ್ತದೆ ಎಂದರು.
ಈ ಬಜೆಟ್ ಯುವ ಭಾರತದ ಯುವ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ. ಬಜೆಟ್‌ನಲ್ಲಿ ಎರಡು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಂಶೋಧನೆ ಮತ್ತು ಆವಿಷ್ಕಾರಕ್ಕಾಗಿ 1 ಲಕ್ಷ ಕೋಟಿ ರೂಪಾಯಿಗಳ ನಿಧಿಯನ್ನು ಘೋಷಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂ. ಮೀಸಲಿಡಲಾಗಿದೆ ಎಂದು ಹೇಳಿದರು.
ಈ ಬಜೆಟ್ ಬಡವರು ಮತ್ತು ಮಧ್ಯಮ ವರ್ಗದವರ ಸಬಲೀಕರಣ ಗುರಿಯ ಜತೆಗೆ ಹೊಸ ಉದ್ಯೋಗಾವಕಾಶಗಳ ಸೃಷ್ಟಿಗೆ ಒತ್ತು ನೀಡುತ್ತದೆ. ಬಡವರಿಗೆ ಹೆಚ್ಚುವರಿಯಾಗಿ 2 ಕೋಟಿ ಮನೆಗಳನ್ನು ನಿರ್ಮಿಸಿಕೊಡುವುದಾಗಿ ಘೋಷಿಸಲಾಗಿದೆ. ನಾವೀಗ 3 ಕೋಟಿ ‘ಲಖಪತಿ ದೀದಿಗಳನ್ನು’ ಹೊಂದುವ ಗುರಿ ಹೊಂದಿದ್ದೇವೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಆಯುಷ್ಮಾನ್ ಭಾರತ್ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದರು.
ಆದಾಯ-ತೆರಿಗೆ ಪರಿಹಾರ ಯೋಜನೆಯು ಮಧ್ಯಮ ವರ್ಗದ 1 ಕೋಟಿ ಜನರಿಗೆ ಪರಿಹಾರವನ್ನು ನೀಡುತ್ತದೆ. ಈ ಬಜೆಟ್‌ನಲ್ಲಿ ರೈತರಿಗಾಗಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮೋದಿ ಕೊಂಡಾಡಿದರು.(ಏಜೆನ್ಸೀಸ್​)
ಅತ್ಯಂತ ಕಡಿಮೆ ಅವಧಿಯಲ್ಲಿ ಬಜೆಟ್​ ಮಂಡನೆ! ಇಲ್ಲಿದೆ ವಿತ್ತ ಸಚಿವರ ಹಿಂದಿನ ದಾಖಲೆಗಳ ಕಂಪ್ಲೀಟ್​ ವಿವರ…

ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ; ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + seventeen =
Remember me
