ಜೈಪುರ:ಲೋಕಸಭಾ ಚುನಾವಣೆ 2024ರ ಫಲಿತಾಂಶ ಜೂನ್​. 04ರಂದು ಅಧಿಕೃತವಾಗಿ ಹೊರಬೀಳಲಿದ್ದು, ಕೇಂದ್ರ ಸರ್ಕಾರದಲ್ಲಿ ಯಾರಿಗೆ ದೊರೆಯಲಿದೆ ಅಧಿಕಾರದ ಚುಕ್ಕಾಣಿ ಎಂಬುದೇ ಇದೀಗ ಜನಸಾಮಾನ್ಯರ ಕುತೂಹಲಕ್ಕೆ ಕಾರಣವಾಗಿದೆ. ಇನ್ನು ಇತ್ತೀಚೆಗಷ್ಟೇ ಹೊರಬಿದ್ದ ಚುನಾವಣೋತ್ತರ ಸಮೀಕ್ಷಾ ವರದಿ ಗೆಲುವಿನ ಪತಾಕೆ ಯಾರು ಹಾರಿಸಲಿದ್ದಾರೆ ಎಂಬುದರ ಮುನ್ನೋಟವನ್ನು ನೀಡಿದ್ದೇ ಆದರೂ ಅಧಿಕೃತ ಘೋಷಣೆ ಏನಿದೆ? ಎಂಬುದನ್ನು ನಾಳೆಯವರೆಗೂ ಕಾದು ತಿಳಿಯಬೇಕಿದೆ.
ಇದನ್ನೂ ಓದಿ:ಹೆಂಡತಿ ಗೆಲ್ಲಬೇಕೆಂದು.. ಹೀರೋ ಉರುಳು ಸೇವೆ! ವೀಡಿಯೋ ವೈರಲ್​
ಒಂದೆಡೆ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವೇ ಅಧಿಕಾರ ವಹಿಸಲಿದೆ ಎಂದು ಹೇಳಿದರೆ, ಮತ್ತೊಂದೆಡೆ ಕಾಂಗ್ರೆಸ್​ ಈ ಬಾರಿ ಮೋದಿ ಸರ್ಕಾರವನ್ನು ಕೆಳಗಿಳಿಸಲಿದೆ ಎಂದು ಹೇಳಲಾಗಿದೆ. ಆದ್ರೆ, ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನೋಡುವುದಾದರೆ, ದೇಶದಲ್ಲಿ ಬಿಜೆಪಿ 300ಕ್ಕೂ ಹೆಚ್ಚು ಸೀಟ್​ಗಳನ್ನು ಗೆಲ್ಲಲಿದೆ ಎಂಬುದು ಬಹುತೇಕ ಖಚಿತವಾಗಿದೆ.
ಇನ್ನು ಈ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ನಾಯಕರಲ್ಲಿ ಸಂಭ್ರಮ ಮುಗಿಲು ಮುಟ್ಟಿದ್ದು, ಈಗಾಗಲೇ ಆಯಾ ರಾಜ್ಯಗಳ ಪ್ರಧಾನ ಕಛೇರಿಗಳಲ್ಲಿ ಸಡಗರಕ್ಕೆ ಸಕಲ ಸಿದ್ಧತೆಗಳನ್ನು ಸಹ ಮಾಡಿಕೊಳ್ಳಲಾಗಿದೆ. ಇದೇ ಖುಷಿಯಲ್ಲಿ ರಾಜಸ್ಥಾನದ ಜೈಪುರದಲ್ಲಿರುವ ಬಿಜೆಪಿ ಕಛೇರಿಯಲ್ಲಿ ಸಿಹಿ ತಯಾರಿಸಲಾಗುತ್ತಿದ್ದು, ಇದರ ವಿಡಿಯೋ ತುಣುಕು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ,(ಏಜೆನ್ಸೀಸ್).
ಡಕ್​ಔಟ್​ ಆಗಿದ್ದಕ್ಕೆ ಹಿಗ್ಗಾಮುಗ್ಗಾ ಟ್ರೋಲ್​ ಮಾಡ್ತೀರಾ! ಇವರ ಅಸಲಿ ಬ್ಯಾಟಿಂಗ್ ನೋಡಿದ್ರೆ ಕಳೆದೋಗ್ತಿರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 5 =
Remember me
