ಗ್ರೇಟರ್ ನೋಯ್ಡಾ:ಆನ್‌ಲೈನ್ ಫುಡ್ ಡೆಲಿವರಿ ಕಂಪನಿ ಸ್ವಿಗ್ಗಿಯ ಡೆಲಿವರಿ ಬಾಯ್‌ ಓರ್ವ, ಆರ್ಡರ್ ಕೊಡುವುದು ತಡವಾಗಿರುವ ವಿಚಾರಕ್ಕೆ ಗಲಾಟೆ ನಡೆಸಿದ್ದಲ್ಲದೆ, ರೆಸ್ಟೋರೆಂಟ್‌ ಮಾಲೀಕನನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.
ಬುಧವಾರ 12:15ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಆರೋಪಿಯನ್ನು ಪತ್ತೆ ಹಚ್ಚಲು ಆ ಪ್ರದೇಶದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ ಎನ್ನಲಾಗಿದೆ.
ಕೊಲೆಯಾದ ವ್ಯಕ್ತಿ ಸುನೀಲ್ ಅಗರ್ವಾಲ್, ಜಮ್ ಜಮ್ ರೆಸ್ಟೋರೆಂಟ್ ಮಾಲೀಕರಾಗಿದ್ದರು. ಡೆಲಿವರಿ ಬಾಯ್‌, ಚಿಕನ್ ಬಿರಿಯಾನಿ ಹಾಗೂ ಪೂರಿ ಸಬ್ಜಿಯ ಆರ್ಡರ್ ಪಡೆಯಲು ರೆಸ್ಟೋರೆಂಟ್ ತಲುಪಿದ್ದ. ಸಮಯಕ್ಕೆ ಸರಿಯಾಗಿ ಬಿರಿಯಾನಿ ಸಿದ್ಧವಾಗಿತ್ತು. ಪೂರಿ ಸಬ್ಜಿ ಸ್ವಲ್ಪ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ ಎಂದು ಓರ್ವ ರೆಸ್ಟೋರೆಂಟ್ ಕೆಲಸಗಾರ ಹೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ವಾಗ್ವಾದ ಮುಂದುವರೆದಿದೆ.
ಈ ವೇಳೆ ರೆಸ್ಟೋರೆಂಟ್ ಮಾಲೀಕ ಸುನೀಲ್ ಅಗರ್ವಾಲ್ ಮಧ್ಯಪ್ರವೇಶಿಸಿ ಜಗಳ ಬಿಡಿಸಲು ಪ್ರಯತ್ನಿಸಿದರು. ಡೆಲಿವರಿ ಬಾಯ್ ತನ್ನ ಸ್ನೇಹಿತನ ಸಹಾಯದಿಂದ ರೆಸ್ಟೋರೆಂಟ್ ಮಾಲೀಕನ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ತಕ್ಷಣವೇ ರೆಸ್ಟೋರೆಂಟ್ ಮಾಲೀಕನನ್ನು ಹತ್ತಿರದಲ್ಲಿದ್ದ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಪೊಲೀಸರು ನಡೆಸಿದ ತನಿಖೆ ವೇಳೆ ಆರೋಪಿ ಮದ್ಯ ಸೇವಿಸಿದ್ದನು ಎಂಬ ಮಾಹಿತಿ ತಿಳಿದು ಬಂದಿದೆ.
ನಟೋರಿಯಸ್ ರೌಡಿ ಬಾಂಬೆ ರವಿ ಕರೊನಾಗೆ ಬಲಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + one =
Remember me
