ನವದೆಹಲಿ:2024ರ ಐಸಿಸಿ ಟಿ20 ವಿಶ್ವಕಪ್‌ ಜೂನ್ 1 ರಿಂದ ಆರಂಭವಾಗುತ್ತಿದೆ. ಈ ಮೆಗಾ ಟೂರ್ನಿಗಾಗಿ ಈಗಾಗಲೇ ಆನೇಕ ತಂಡಗಳು ಅಮೆರಿಕಾ ತಲುಪಿವೆ. ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಮೊದಲ ಬ್ಯಾಚ್ ಅಮೆರಿಕಕ್ಕೆ ತೆರಳಿದೆ. ನಾಯಕ ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ರಿಷಬ್ ಪಂತ್, ಶಿವಂ ದುಬೆ ಮತ್ತು ಇತರ ಕೆಲವು ಆಟಗಾರರನ್ನು ಒಳಗೊಂಡಿರುವ ಈ ಬ್ಯಾಚ್‌ನಿಂದ ವಿರಾಟ್ ಕೊಹ್ಲಿ ಕಾಣೆಯಾಗಿದ್ದಾರೆ.
ಭಾರತ ಟಿ20 ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ. ಮೀಸಲು ಆಟಗಾರರು: ಶುಭಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
The wait is over.
We are back!
Let's show your support for#TeamIndia🇮🇳pic.twitter.com/yc69JiclP8
— BCCI (@BCCI)May 25, 2024

ಮೆಗಾ ಟೂರ್ನಿಗಾಗಿ ಈಗಾಗಲೇ ಆನೇಕ ತಂಡಗಳು ಅಮೆರಿಕಾ ತಲುಪಿವೆ. ಟಿ20 ವಿಶ್ವಕಪ್‌ಗಾಗಿ ಭಾರತ ತಂಡದ ಮೊದಲ ಬ್ಯಾಚ್ ಅಮೆರಿಕಕ್ಕೆ ತೆರಳಿದೆ. ಆದರೆ ತಂಡದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್‌ ಪಾಂಡ್ಯ ವಿಡಿಯೋದಲ್ಲಿ ಕಾಣಿಸಿಕೊಂಡಿಲ್ಲ.
ಪ್ರಮುಖ ಕಾರಣ ವಿರಾಟ್ ಕೊಹ್ಲಿ ಅವರ USA ವೀಸಾ ಪೇಪರ್ ಕೆಲಸ ವಿಳಂಬವಾಗಿರುವುದು. ಹಾಗಾಗಿ ಅವರು ಮೊದಲ ಬ್ಯಾಚ್‌ನೊಂದಿಗೆ ಪ್ರಯಾಣಿಸಿಲ್ಲ ಎಂದು ತಿಳಿದುಬಂದಿದೆ. ಅಲ್ಲದೇ ಮೇ 30 ರಂದು ವಿರಾಟ್ ಕೊಹ್ಲಿ ನ್ಯೂಯಾರ್ಕ್ ಗೆ ತೆರಳುವ ಸಾಧ್ಯತೆ ಇದೆ. ಮೇ 30ರ ನಂತರ ವಿರಾಟ್ ಕೊಹ್ಲಿ ಅಮೆರಿಕಕ್ಕೆ ಹೋದರೆ ಅಭ್ಯಾಸ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಜೂನ್ 1 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ಅಭ್ಯಾಸ ಪಂದ್ಯ ನಡೆಯಲಿದೆ. ಅದಕ್ಕೂ ಮುನ್ನ ಅವರು ಟೀಂ ಇಂಡಿಯಾ ಸೇರುವ ಸಾಧ್ಯತೆ ಇದೆ.
ವಿರಾಟ್ ಕೊಹ್ಲಿ ಜೊತೆಗೆ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಕೂಡ ಮೊದಲ ಬ್ಯಾಚ್ ಆಟಗಾರರೊಂದಿಗೆ ಹೋಗಿರಲಿಲ್ಲ. ಸದ್ಯ ಲಂಡನ್ ನಲ್ಲಿರುವ ಹಾರ್ದಿಕ್ ಅಲ್ಲಿಂದ ನೇರವಾಗಿ ತಂಡ ಸೇರುವ ಭರವಸೆಯಲ್ಲಿದ್ದಾರೆ.
ಈ ಬಾರಿಯ ಟಿ20 ವಿಶ್ವಕಪ್ ಜೂನ್ 2ರಿಂದ ಆರಂಭವಾಗಲಿದೆ. ಜೂನ್ 4 ರಂದು ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಅಲ್ಲದೆ ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − eleven =
Remember me
