ಜೈಪುರ:ಬಿಜೆಪಿಯ ವಿವಾದಿತ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ ಟೈಲರ್ ಕನ್ನಯ್ಯ ಲಾಲ್​ ಅವರ​ ರುಂಡ ಕತ್ತರಿಸಿದ ಪುಂಡರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜಸ್ಥಾನದ ಉದಯಪುರದ ಮಲ್ಡಾಸ್ ಸ್ಟ್ರೀಟ್​ನಲ್ಲಿರುವ ಟೈಲರಿಂಗ್ ಅಂಗಡಿಯೊಳಕ್ಕೆ ಬಂದಿದ್ದ ದುಷ್ಕರ್ಮಿಗಳಿಬ್ಬರ ಪೈಕಿ ಒಬ್ಬಾತ ಬಟ್ಟೆ ಹೊಲಿಸಲು ಕೊಡುವ ಸೋಗಿನಲ್ಲಿ ಒಳಕ್ಕೆ ಹೋಗಿದ್ದ. ಅಲ್ಲಿ ಟೈಲರ್​ ಅಳತೆ ತೆಗೆದುಕೊಂಡು ಬರೆದುಕೊಳ್ಳುವಷ್ಟರಲ್ಲಿ ದಾಳಿ ನಡೆಸಿದ ಇವರು ಹಲ್ಲೆ ಮಾಡಿ, ರುಂಡ ಕತ್ತರಿಸಿ ಪರಾರಿಯಾಗಿದ್ದರು.
ಘಟನೆ ಬಳಿಕ ಸ್ಥಳದಲ್ಲಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕದ ವಾತಾವರಣ ಉಂಟಾಗಿದ್ದಲ್ಲದೆ, ಪ್ರಕ್ಷುಬ್ಧ ಪರಿಸ್ಥಿತಿ ಸೃಷ್ಟಿಯಾಗಿತ್ತು. ಕೂಡಲೇ ಕಾರ್ಯಾಚರಣೆಗಿಳಿಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಈ ಕೊಲೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಜೀವ ಬೆದರಿಕೆಯೊಡ್ಡಿದ್ದು, ಆ ವಿಡಿಯೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.
ಇದನ್ನೂ ಓದಿ:ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಾತನ ತಲೆಯೇ ಕಟ್!; ಪ್ರಧಾನಿ ಮೋದಿಗೂ ಕೊಲೆ ಬೆದರಿಕೆ!
ರಜ್ಸಾಮಂಡ್ ಜಿಲ್ಲೆಯ ಭೀಮ್​ ಪ್ರದೇಶದಲ್ಲಿ ಮುಖ ಕಾಣಿಸದಂಥ ಹೆಲ್ಮೆಟ್ ಹಾಕಿಕೊಂಡು ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂದು ರಜ್ಸಾಮಂಡ್ ಎಸ್​ಪಿ ಸುಧೀರ್ ಚೌಧರಿ ತಿಳಿಸಿದ್ದಾರೆ. ಬಂಧಿತರೇ ಆರೋಪಿಗಳು ಎನ್ನುವುದು ಖಚಿತವಾಗಿದೆ. ಅಲ್ಲದೆ ತನಿಖೆ ಕೈಗೊಂಡ ಇತರ ಆರೋಪಿಗಳನ್ನೂ ಪತ್ತೆ ಹಚ್ಚಿ ಬಂಧಿಸುವ ಸಲುವಾಗಿ ಹತ್ತು ತಂಡಗಳನ್ನು ರಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
‘ನಮಸ್ಕಾರ ದೇವರು’ ಅಂತ ಹೇಳೋದ್ಯಾಕೆ ಡಾಕ್ಟರ್​ ಬ್ರೋ?; ಹಣ ಬೇಕಾದಾಗ ಯಾವ ಹೋಟೆಲ್​ಗೆ ಹೋಗ್ತಾರೆ!

ಕಾರಿನ ಗಾಜನ್ನು ಒರೆಸುತ್ತ ಫಾಸ್ಟ್ಯಾಗ್ ಹಣ ಕಬಳಿಸುವವರ ಹಾವಳಿ?; ಹೊರಬಿತ್ತು ಅಸಲಿಯತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 5 =
Remember me
