ನವದೆಹಲಿ:ತಾಜ್ ಮಹಲ್ ಕುರಿತ ಚರ್ಚೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಆಗ್ರಾದಲ್ಲಿರುವ ತಾಜ್ ಮಹಲ್ ಮೂಲತಃ ಹಿಂದು ದೇವಾಲಯ ಎಂಬ ಅರ್ಜಿ ಕೋರ್ಟ್​ನಲ್ಲಿ ಇತ್ತೀಚೆಗೆ ತಿರಸ್ಕೃತಗೊಂಡ ಬೆನ್ನಲ್ಲೇ, ಈಗ ಮತ್ತೊಂದು ಅರ್ಜಿ ಹೈಕೋರ್ಟ್​ಗೆ ಸಲ್ಲಿಕೆಯಾಗಿದೆ. ಮೊಘಲ್ ಚಕ್ರವರ್ತಿ ಷಹಜಹಾನ್ ತಾಜ್ ಮಹಲ್ ನಿರ್ವಿುಸಿಲ್ಲ. ರಾಜಾ ಮಾನ್ ಸಿಂಗ್ ಅವರ ಅರಮನೆಯನ್ನು ಷಹಜಹಾನ್ ನವೀಕರಿಸಿದ್ದಾರೆ ಎಂದು ಸಲ್ಲಿಸಿರುವ ಅರ್ಜಿಯನ್ನು ಪರಿಶೀಲಿಸುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆಗೆ (ಎಎಸ್​ಐ) ಆದೇಶಿಸಿದೆ.
ಆಗ್ರಾದ ತಾಜ್​ಮಹಲ್​ ಸ್ಥಳದಲ್ಲಿ ರಾಜಾ ಮಾನ್ ಸಿಂಗ್​ನ ಅರಮನೆ ಅಸ್ತಿತ್ವದಲ್ಲಿದ್ದ ಬಗ್ಗೆ ಸಂಶೋಧನೆ ನಡೆಯಬೇಕು. ತಾಜ್​ವುಹಲ್ ಎಷ್ಟು ವರ್ಷದ ಹಿಂದೆ ನಿರ್ಮಾಣ ಮಾಡಲಾಗಿದೆ ಎಂಬ ಬಗ್ಗೆ ಅಧ್ಯಯನ ನಡೆಸಲು ಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಲಾಗಿದೆ. ತಾಜ್ ಮಹಲ್ ನಿರ್ವಣಕ್ಕೆ ಸಂಬಂಧಿಸಿದಂತೆ ತಪ್ಪು ಐತಿಹಾಸಿಕ ಸಂಗತಿಗಳನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ. ಶಾಲೆಗಳಲ್ಲೂ ಇದನ್ನೇ ಬೋಧನೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆರೋಪ ಮಾಡಿದ್ದಾರೆ.
ತಾಜ್ ಮಹಲ್ ಅನ್ನು ಮೊಘಲ್ ಚಕ್ರವರ್ತಿ ಷಹಜಹಾನ್ ನಿರ್ವಿುಸಲಿಲ್ಲ, ರಾಜಪುತಾನ (ಇಂದಿನ ರಾಜಸ್ಥಾನ) ಕಛಾವಾ ರಾಜವಂಶದ ಕ್ಷತ್ರಿಯ ರಾಜ ಮಾನ್ ಸಿಂಗ್ ನಿರ್ವಿುಸಿದ್ದು ಎಂದು ಅರ್ಜಿದಾರರು ಹೇಳಿದ್ದಾರೆ. ಈ ಹಿಂದೆಯೂ ಸುಪ್ರೀಂಕೋರ್ಟ್ ನಲ್ಲಿ ಇದೇ ರೀತಿಯ ಅರ್ಜಿ ಸಲ್ಲಿಕೆಯಾಗಿತ್ತು. ಬಳಿಕ ಎಎಸ್​ಐ ಮುಂದೆ ಅರ್ಜಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸಂಸ್ಥೆಗೆ ಸೂಚಿಸಿತ್ತು ಎಂದು ಪೀಠ ತಿಳಿಸಿದೆ. ತಮ್ಮ ಮನವಿಯ ಬಗ್ಗೆ ಎಎಸ್​ಐ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅರ್ಜಿದಾರರಾದ ಸುರ್ಜಿತ್ ಸಿಂಗ್ ಯಾದವ್ ಅವರ ವಕೀಲರು ಹೈಕೋರ್ಟ್ ಗೆ ತಿಳಿಸಿದರು. ನಂತರ ಪೀಠವು ಅರ್ಜಿ ಪರಿಶೀಲಿಸುವಂತೆ ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆಗೆ ಆದೇಶಿಸಿದೆ. ಇತಿಹಾಸ ಪಠ್ಯಪುಸ್ತಕಗಳಲ್ಲಿ ತಾಜ್ ಮಹಲ್ ಕುರಿತು ಇರುವ ತಪ್ಪಾದ ಮಾಹಿತಿಯನ್ನು ಸರಿಪಡಿಸಬೇಕು ಎಂದು ಭಾರತೀಯ ಪುರಾತತ್ವ ಸರ್ವೆಕ್ಷಣಾ ಇಲಾಖೆ, ಕೇಂದ್ರ ಸರ್ಕಾರ, ಭಾರತದ ರಾಷ್ಟ್ರೀಯ ದಾಖಲೆಗಳು ಮತ್ತು ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಹೈಕೋರ್ಟ್​ಗೆ ಒತ್ತಾಯಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
