ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​ ಮೋದಿ(Heeraben Modi) ಅವರ ಅಂತ್ಯಕ್ರಿಯೆ ಹಿಂದು ಸನಾತನ ಪದ್ಧತಿಯಂತೆ ಶುಕ್ರವಾರ ಬೆಳಗ್ಗೆ ಕುಟುಂಬಸ್ಥರ ಸಮ್ಮುಖದಲ್ಲಿ ನೆರವೇರಿದೆ. ಇದಾದ ಬಳಿಕ ಪ್ರದಾನ ಮಂತ್ರಿ ನರೇಂದ್ರ ಮೋದಿ, ವಿಡಿಯೋ ಕಾನ್ಫರೆನ್ಸ್​ ಮೂಲಕ ಹೌರಾ ಮತ್ತು ನ್ಯೂ ಜಲ್ಪೈಗುರಿಯನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲು ಸಂಚಾರಕ್ಕೆ ವರ್ಚುವಲ್ ಆಗಿ ಹಸಿರು ನಿಶಾನೆ ತೋರಿದ್ದರು.
ಪಶ್ಚಿಮ ಬಂಗಾಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡುತ್ತಾ, ರಾಜ್ಯಕ್ಕೆ ಆಗಮಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದುಕೊಂಡಿದ್ದೆ. ಆದರೆ ನನ್ನ ವೈಯಕ್ತಿಕ ಕಾರಣಗಳಿಂದ ಭಾಗವಹಿಸಲು ಸಾಧ್ಯವಾಗಿಲ್ಲ ಎಂದು ಹೇಳುತ್ತಾ, ಮೋದಿ ಬಂಗಾಳ ಜನರಲ್ಲಿ ಕ್ಷಮೆ ಯಾಚಿಸಿದ್ದರು.
PM Modi inaugurates the Joka-Taratala stretch of the Purple Line of the Kolkata Metro through video conferencing. West Bengal CM Mamata Banerjee is present at the event.(Source: DD)pic.twitter.com/Q3wlmx7zFu— ANI (@ANI)December 30, 2022
PM Modi inaugurates the Joka-Taratala stretch of the Purple Line of the Kolkata Metro through video conferencing. West Bengal CM Mamata Banerjee is present at the event.(Source: DD)pic.twitter.com/Q3wlmx7zFu
ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡುತ್ತಾ, ನಿಮ್ಮ ತಾಯಿ ನಮಗೂ ತಾಯಿಯಿದ್ದಂತೆ. ನೀವಿಂದು ತಾಯಿಯನ್ನು ಕಳೆದುಕೊಂಡಿದ್ದೀರಿ. ಈ ಸಂದರ್ಭದಲ್ಲಿ ನನಗೆ ಯಾವ ರೀತಿ ಸಂತಾಪ ಸೂಚಿಸಬೇಕೆಂದು ತಿಳಿಯುತ್ತಿಲ್ಲ. ನನ್ನ ತಾಯಿ ಇಲ್ಲವಾದ ದಿನ ನೆನಪಾಗುತ್ತಿದೆ. ನೀವು ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಪ್ರಧಾನ ಮಂತ್ರಿ ಮೋದಿಗೆ ಸೂಚನೆ ನೀಡಿದರು.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + thirteen =
Remember me
