ನವದೆಹಲಿ:ಕೇಂದ್ರ ಹಣಕಾಸು ಸಚಿವಾಲಯವು ಸರ್ಕಾರಿ ಸ್ವಾಮ್ಯದ ಮೂರು ಬ್ಯಾಂಕ್​ಗಳ ಖಾಸಗೀಕರಣ ಪ್ರಕ್ರಿಯೆಗೆ ಚಾಲನೆ ನೀಡಿದೆ.ಅವುಗಳನ್ನು ಆರ್ಥಿಕವಾಗಿ ಇನ್ನಷ್ಟು ಸದೃಢಗೊಳಿಸುವ ಹಾಗೂ ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೊಳಗಾಗದಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಬಳಸಿ ಪುನಶ್ಚೇತನ ಕಾರ್ಯ ಕೈಗೊಳ್ಳುವ ಹೊರೆಯನ್ನು ತಪ್ಪಿಸಲು ಈ ಕ್ರಮಕ್ಕೆ ಮುಂದಾಗಿದೆ ಎನ್ನಲಾಗಿದೆ.
ಸರ್ಕಾರದ ನೀತಿ ನಿರೂಪಣಾ ಸಂಸ್ಥೆಯಾದ ನೀತಿ ಆಯೋಗದಿಂದಲೇ ನೀಡಲಾದ ಸಲಹೆ ಮೇರೆಗೆ ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಲಾಗುತ್ತಿದೆ.ಪಂಜಾಬ್​ ಮತ್ತು ಸಿಂಧ್​ ಬ್ಯಾಂಕ್​, ಬ್ಯಾಂಕ್​ ಆಫ್​ ಮಹಾರಾಷ್ಟ್ರ ಹಾಗೂ ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ ಖಾಸಗೀಕರಣದ ಬಗ್ಗೆ ಚರ್ಚೆಗಳು ಜಾರಿಯಲ್ಲಿವೆ. ಈ ಕಾರಣಕ್ಕಾಗಿಯೇ ಈ ಮೂರು ಬ್ಯಾಂಕುಗಳನ್ನು ವಿಲೀನ ಪ್ರಕ್ರಿಯೆಯಿಂದ ಹೊರಗಿಡಲಾಗಿತ್ತು ಎಂದು ಹೇಳಲಾಗಿದೆ.
ಇದನ್ನೂ ಓದಿ;ಆರ್ಥಿಕ ಪುನಶ್ಚೇತನಕ್ಕೆ ಮೂರನೇ ಸುತ್ತಿನ ಪ್ಯಾಕೇಜ್​ ನಿರೀಕ್ಷೆ; ಬೇಡಿಕೆ ಸೃಷ್ಟಿಗೆ ಸಿಗಲಿದೆಯೇ ನಗದು ಪರಿಹಾರ
ಬ್ಯಾಂಕಿಂಗ್​ ಕ್ಷೇತ್ರದಲ್ಲಿ ದೀರ್ಘ ಕಾಲಾವಧಿಗೆ ಖಾಸಗಿ ಬಂಡವಾಳ ಹೂಡಿಕೆಗೆ ಅವಕಾಶ ಕಲ್ಪಿಸಬೇಕು ಎಂಬುದು ನೀತಿ ಆಯೋಗದ ಸಲಹೆಯಾಗಿದೆ. ಬೃಹತ್​ ಉದ್ಯಮ ಸಂಸ್ಥೆಗಳಿಗೆ ಕೆಲ ಷರತ್ತುಗಳಿಗೆ ಬ್ಯಾಂಕಿಂಗ್​ ವಹಿವಾಟು ನಡೆಸಲು ಪರವಾನಗಿ ನೀಡಬೇಕೆಂದು ಕೂಡ ನೀತಿ ಆಯೋಗ ಶಿಫಾರಸು ಮಾಡಿದೆ.
ರಾಷ್ಟ್ರೀಕರಣಗೊಂಡ ಕೆಲ ಬ್ಯಾಂಕುಗಳ ಖಾಸಗೀಕರಣದ ಚರ್ಚೆ ನಡೆದಿದೆ. ಆದರೆ, ಈ ಬಗ್ಗೆ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ. ಈ ಬಗ್ಗೆ ಮುಂದಿನ ಹಂತದಲ್ಲಿ ಬೆಳವಣಿಗೆಗಳು ಉಂಟಾಗಬೇಕಾದರೆ, ಬ್ಯಾಂಕ್​ಗಳ ರಾಷ್ಟ್ರೀಕರಣ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ;ಲಿಪ್​ಸ್ಟಿಕ್​ ಇಂಡೆಕ್ಸ್​; ಅರ್ಥಶಾಸ್ತ್ರದ ಸಿದ್ಧಾಂತವನ್ನೇ ಬುಡಮೇಲಾಗಿಸಿದ ಕರೊನಾ
ಆರ್ಥಿಕ ವ್ಯವಸ್ಥೆಯಲ್ಲಿ ಖಾಸಗಿ ಹೂಡಿಕೆಗೆ ಮುಕ್ತ ಅವಕಾಶಗಳನ್ನು ಕಲ್ಪಿಸುವ ಬಗ್ಗೆ ಕಳೆದ ತಿಂಗಳು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್​ನ ಕಳೆದ ತಿಂಗಳಷ್ಟೇ ಘೋಷಿಸಿದ್ದರು.
ಕರೊನಾ ದೂರವಿಟ್ಟು ಬೆಂಗಳೂರಿನಿಂದ 2,000 ಕಿ.ಮೀ ಕಾಲ್ನಡಿಗೆಯಲ್ಲಿ ಮನೆ ತಲುಪಿದ, ಹೊಂಚು ಹಾಕಿದ್ದ ವಿಧಿಯನ್ನು ವಂಚಿಸಲಾಗಲಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − three =
Remember me
