ಚೆನ್ನೈ:ವಾರದ ಹಿಂದೆಯಷ್ಟೇ ತಮಿಳುನಾಡಿನಲ್ಲಿ ಸಂಭವಿಸಿದ್ದ ಪಟಾಕಿ ದುರಂತದಲ್ಲಿ 9 ಮಂದಿ ಸಾವಿಗೀಡಾಗಿದ್ದರು. ಇದೀಗ ಆ ಪ್ರಕರಣದ ನೆನಪು ಜನರ ಮನಸಲ್ಲಿ ಹಸಿಯಾಗಿರುವಾಗಲೇ ತಮಿಳುನಾಡಿನಲ್ಲಿ ಇನ್ನೊಂದು ಪಟಾಕಿ ದುರಂತ ಸಂಭವಿಸಿದ್ದು, ಇದರಲ್ಲೂ 9 ಮಂದಿ ಸಾವಿಗೀಡಾಗಿದ್ದಾರೆ.
ತಮಿಳುನಾಡಿನ ವಿರುಧುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಕನಿಷ್ಠ 9 ಮಂದಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ತುರ್ತು ಹಾಗೂ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ಆರಿಸುವ ಜತೆಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಬೆಂಗಳೂರಿನ ಅಗರಬತ್ತಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 8 ಬೈಕ್​ಗಳು ಸುಟ್ಟು ಭಸ್ಮ
ಶಿವಕಾಸಿಯ ಈ ಪಟಾಕಿ ಕಾರ್ಖಾನೆಯಲ್ಲಿ ಇಂದು ಮಧ್ಯಾಹ್ನದ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ. ಅಗ್ನಿ ಆಕಸ್ಮಿಕ ಸಂಭವಿಸಲು ಕಾರಣ ಏನು ಎಂಬ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
ಇದನ್ನೂ ಓದಿ:ತಮಿಳುನಾಡು| ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; 9 ಮಂದಿ ಸಾವು
ತಮಿಳುನಾಡಿನ ಅರಿಯಲೂರ್ ಜಿಲ್ಲೆಯ ವೆಟ್ರಿಯೂರು ಗ್ರಾಮದ ಬಳಿ ಇರುವ ವೀರಗಾಲೂರು ಸಮೀಪ ಅ. 9ರಂದು ಪಟಾಕಿ ದುರಂತ ಸಂಭವಿಸಿತ್ತು. ಈ ಅವಘಡದಲ್ಲಿ 9 ಮಂದಿ ಸಾವಿಗೀಡಾಗಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದರು.
#WATCH| Tamil Nadu: An explosion took place at a firecracker manufacturing factory near Sivakasi in Virudhunagar district, fire extinguisher reaches the spot: Fire and Rescue departmentpic.twitter.com/CqE1kCAJ3S
— ANI (@ANI)October 17, 2023

ಜೊಮ್ಯಾಟೊ ಫುಡ್ ಡೆಲಿವರಿಗೆ ಸ್ಟೈಲಿಶ್ ಬೈಕು, ಚಂದದ ಯುವತಿ!; ಏನಿದರ ರಹಸ್ಯ?

ರಾತ್ರಿ ಸರಿಯಾಗಿ ನಿದ್ರೆ ಬರದಿದ್ದರೆ ಅದಕ್ಕೆ ಇವೇ ಕಾರಣಗಳಂತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
