ಚೆನ್ನೈ:ಲಾಕ್​ಡೌನ್​ ಸಡಿಲಿಕೆಯಿಂದ ಕರೊನಾವೈರಸ್​ ಸೋಂಕು ಹೆಚ್ಚುತ್ತಿರುವುದನ್ನು ಮನಗಂಡಿರುವ ತಮಿಳುನಾಡು ಸರ್ಕಾರ ವೈರಸ್ ಸೋಂಕು ನಿಯಂತ್ರಿಸುವ ಸಲುವಾಗಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ.
ಚೆನ್ನೈ, ತಿರುವಳ್ಳೂರು, ಕಾಂಚಿಪುರಂ, ಚೆಂಗಲ್‌ಪಟ್ಟು‌ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಜೂನ್ 19ರಿಂದ 30ರ ತನಕ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್ ಆಗಿರುತ್ತದೆ. 4 ಜಿಲ್ಲೆಗಳಲ್ಲಿ ವೈದ್ಯಕೀಯ ಸೇವೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದಿದ್ದಾರೆ ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ.
ಇದನ್ನೂ ಓದಿ:ಪಾಕ್ ಕತ್ತೆಗೆ ಅಂತೂ ಸಿಕ್ತು ಜಾಮೀನು: ಹಾಗಿದ್ರೆ ಆಗಿದ್ದೇನು?
ಅಗತ್ಯ ಸೇವೆಗಳನ್ನು ಮಾರಾಟ ಮಾಡುವ ಅಂಗಡಿಗಳು ಮಾತ್ರ ಬಾಗಿಲು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ದಿನಸಿ ಅಂಗಡಿ, ತರಕಾರಿ ಅಂಗಡಿ, ಪೆಟ್ರೋಲ್ ಬಂಕ್ ಮುಂತಾದ ಅಂಗಡಿಗಳು 6 ರಿಂದ 2 ಗಂಟೆ ತನಕ ಮಾತ್ರ ತೆರೆಯಬಹುದಾಗಿದೆ. ಖಾಸಗಿ ಕಾರು ಮತ್ತು ಬೈಕ್‌ನಲ್ಲಿ ಜನರು 2 ಕಿ. ಮೀ. ತನಕ ಮಾತ್ರ ಸಂಚಾರ ನಡೆಸಬಹುದಾಗಿದೆ.
ಮುಖ್ಯಮಂತ್ರಿ ಮತ್ತು ಆರೋಗ್ಯ ತಜ್ಞರನ್ನು ಒಳಗೊಂಡ ಸಭೆಯ ನಂತರ ಈ ಪ್ರಕಟಣೆ ಹೊರಬಂದಿದೆ. ಪೊಲೀಸರು ತಂಡಗಳನ್ನು ರಚನೆ ಮಾಡಿಕೊಂಡು ಲಾಕ್​ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದ್ದಾರೆ.
ತಮಿಳುನಾಡಿನಲ್ಲಿ ಪ್ರಸ್ತುತ ಕರೊನಾ ಸೋಂಕಿತರ ಸಂಖ್ಯೆ 44,661ರಷ್ಟಿದ್ದು. 24,547 ಮಂದಿ ಚೇತರಿಸಿಕೊಂಡಿದ್ದಾರೆ. 435 ಮಂದಿ ಮೃತಪಟ್ಟಿದ್ದಾರೆ. ಚೆನ್ನೈ ನಗರ ಒಂದರಲ್ಲಿಯೇ 31,896 ಪ್ರಕರಣಗಳು ಪತ್ತೆಯಾಗಿವೆ. ಕಳೆದ ವಾರದಿಂದ ಸೋಂಕಿತರ ಸಂಖ್ಯೆ ವಿಪರೀತ ಏರಿಕೆಯಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.(ಏಜೆನ್ಸೀಸ್​)
ಬ್ಯಾಂಕ್​ನಲ್ಲೂ ಖಾತೆ ತೆರೆದ ಕರೊನಾ: ಎಸ್​ಬಿಐ ಶಾಖೆಗಳು ಕ್ಲೋಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − 4 =
Remember me
