ಚೆನ್ನೈ:ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ ಅವರಿಗೆ ಕೋವಿಡ್​​ ಸೋಂಕು ತಗುಲಿದ್ದು, ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜುಲೈ 12ರಂದೇ ಅವರಿಗೆ ಕೋವಿಡ್​ ಪಾಸಿಟಿವ್​ ಇರುವುದು ಖಚಿತವಾದ ಕೂಡಲೇ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗುರುವಾರ ಬೆಳಗ್ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ತಿಳಿಸಿದೆ. ಈ ಮಧ್ಯೆ ರಾಜ್ಯಪಾಲ ಆರ್​. ಎನ್.​ ರವಿ ಅವರು ಮುಖ್ಯಮಂತ್ರಿಗಳು ಶೀಘ್ರ ಚೇತರಿಸಿಕೊಳ್ಳಲಿದ್ದಾರೆ ಎಂದು ಟ್ವೀಟ್​ ಮಾಡಿದ್ದಾರೆ.
ಈ ಮುನ್ನ ನೀವೊಬ್ಬ ಕ್ರಿಯಾತ್ಮಕ ಹಾಗೂ ಸಾರ್ವಜನಿಕ ನಾಯಕರಾಗಿದ್ದೀರಿ, ಈ ನಡುವೆ ಕೊವಿಡ್​ ತಗುಲಿದ್ದು, ನೀವು ಶೀಘ್ರದಲ್ಲೇ ಗುಣಮುಖರಾಗಬೇಕು. ನಿಮ್ಮ ಚೇತರಿಕೆಗೆ ನಾವು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ರಾಜ್ಯಪಾಲರು ಬುಧವಾರ ಪತ್ರ ಬರೆದಿದ್ದಾರೆ. ಮಾಜಿ ಮುಖ್ಯಮಂತ್ರಿ ಒ ಪನ್ನೀರ್​ ಸೆಲ್ವಂ ಕೂಡ ಟ್ವೀಟ್ ಮಾಡಿದ್ದು, ಮುಖ್ಯಮಂತ್ರಿಗಳು ಶೀಘ್ರಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
