ಹೊಸೂರು:ದೀಪಾವಳಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸಿಲ್ಲ ಅಂತಾ ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಆತಂಕಕಾರಿ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಉಳಿಮಂಗಲಂನಲ್ಲಿ ನಡೆದಿದೆ.
ಶಿವಕುಮಾರ್ (19) ಆತ್ಮಹತ್ಯೆ ಮಾಡಿಕೊಂಡ ಯುವಕ. ದೀಪಾವಳಿ ಹಬ್ಬಕ್ಕೆ ಪಾಲಕರು ಬಟ್ಟೆ ಕೊಡಿಸಿಲ್ಲ ಅಂತಾ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಿವಕುಮಾರ್​ ನರ್ಸರಿ ಫಾರ್ಮ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಇತ್ತೀಚಿಗೆ ಯುವಕರ ಜೊತೆ ಸೇರಿ ಮದ್ಯವ್ಯಸನಿಯಾಗಿದ್ದ. ದೀಪಾವಳಿ ಹಿನ್ನೆಲೆಯಲ್ಲಿ ಹಬ್ಬಕ್ಕೆ ಹೊಸ ಬಟ್ಟೆ ಕೊಡಿಸುವಂತೆ ಪಾಲಕರ ಬಳಿ ಕೇಳಿದ್ದ.
ಆದರೆ, ಪಾಲಕರು ಬಟ್ಟೆ ಕೊಡಿಸಲು ನಿರಾಕರಿಸಿದ್ದಕ್ಕೆ ಶಿವಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾತ್​ರೂಮ್​ನಲ್ಲಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಡೆಂಕಣಿಕೋಟೆ ಪೋಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ನವಾಜ್​ ಎಸೆದ ವೈಡ್​ ಬಾಲ್​ ಸ್ಪಿನ್​ ಆಗಿ ಪ್ಯಾಡ್​ಗೆ ಬಡಿದಿದ್ರೆ ಏನ್​ ಮಾಡ್ತಿದ್ರಿ? ಅಚ್ಚರಿಯ ಉತ್ತರ ಕೊಟ್ಟ ಅಶ್ವಿನ್

ವಿವಾಹೇತರ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಂದು ನಾಟಕವಾಡಿದ ಪತ್ನಿ ಅರೆಸ್ಟ್​

ತೆಲಂಗಾಣದ TRS ಸರ್ಕಾರ ಉರುಳಿಸುವ ಯತ್ನ: ಶಾಸಕರಿಗೆ 100 ಕೋಟಿ ರೂ. ಆಫರ್​, ಸಿಕ್ಕಿಬಿದ್ದ ನಾಲ್ವರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 2 =
Remember me
