ನವದೆಹಲಿ:ತಮಿಳುನಾಡು ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಹೊರಬಿದ್ದಿದೆ. ರಾಜ್ಯದಲ್ಲಿ ಎಐಎಡಿಎಂಕೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಎನ್​ಡಿಎ ಸರ್ಕಾರ ತರುವ ಅಪೇಕ್ಷೆಯಲ್ಲಿರುವ ಪಕ್ಷವು, 20 ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ಇವುಗಳಲ್ಲಿ 17 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಭಾನುವಾರ ಬಿಡುಗಡೆ ಮಾಡಿದ್ದಾರೆ.
ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ.ಅಣ್ಣಾಮಲೈ, ತಮ್ಮ ಸ್ವಕ್ಷೇತ್ರವಾದ ಕರೂರು ಜಿಲ್ಲೆಯ ಅರವಕುರಿಚಿಯಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಯುವ ನಾಯಕರಾದ ಅಣ್ಣಾಮಲೈ, ಈಗಾಗಲೇ ಅರವಕುರಿಚಿಯ ಪ್ರವಾಸದಲ್ಲಿ ತೊಡಗಿದ್ದು, ವೈದ್ಯಕೀಯ ಶಿಬಿರ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಮಾರ್ಚ್​ 11 ರಂದು ಇಡೀ ದಿನ ಸುಮಾರು 90 ಕಿಲೋಮೀಟರ್ ಸೈಕಲ್ ಯಾತ್ರೆ ನಡೆಸಿ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿದ್ದರು.
ಇದನ್ನೂ ಓದಿ:ಡಂಗೂರ ಸಾರಿ ಕರೊನಾ ಲಸಿಕೆ ಬಗ್ಗೆ ಜಾಗೃತಿ
ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಮೂರು ಮಹಿಳಾ ಅಭ್ಯರ್ಥಿಗಳಿದ್ದು, ನಟಿ ಖುಷಬೂ ಸುಂದರ್ ತೌಸಂಡ್​ ಲೈಟ್ಸ್​ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಎಲ್.ಮುರುಗನ್ ಧರಂಪುರ ಮೀಸಲು ಕ್ಷೇತ್ರದ ಅಭ್ಯರ್ಥಿಯಾಗಿದ್ದರೆ, ಹಿರಿಯ ನಾಯಕ ಹೆಚ್.ರಾಜ ಕರೈಕುಡಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಮಮತಾ ಮೇಲೆ ‘ಅಟ್ಯಾಕ್​’ ಆಗಿದೆ ಅನ್ನೋಕೆ ಪುರಾವೆ ಇಲ್ಲ : ಚುನಾವಣಾ ಆಯೋಗ

ಹೇಗ್ಹೇಗೋ ಮುಟ್ಟುತ್ತಾ ‘ಪರೀಕ್ಷೆ’ ನಡೆಸುತ್ತಿದ್ದ ನರ್ಸಿಂಗ್ ಇನ್ಸ್​​ಟಿಟ್ಯೂಟ್ ಮುಖ್ಯಸ್ಥನ ಬಂಧನ

“ಆ ರಹೀ ಹೇ ಪೊಲೀಸ್… !” ಭರ್ಜರಿ ಆ್ಯಕ್ಷನ್ ಚಿತ್ರಕ್ಕೆ ತಯಾರಾಗಿ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 2 =
Remember me
