ಚೆನ್ನೈ:ಕರೊನಾ ವೈರಸ್​ ನಿಯಂತ್ರಣದ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿರುವ ಜನತಾ ಕರ್ಫ್ಯೂಗೆ ದೇಶದೆಲ್ಲೆಡೆ ಉತ್ತಮ ಸ್ಪಂದನೆ ಸಿಕ್ಕಿದೆ.
ಪರಿಸ್ಥಿತಿಯ ಗಂಭೀರತೆ ಅರಿತುಕೊಂಡವರು ಮನೆಯಿಂದ ಹೊರಗೆ ಕಾಲಿಡುತ್ತಿಲ್ಲ. ಎಲ್ಲ ರಾಜ್ಯಗಳಲ್ಲೂ ಕಟ್ಟುನಿಟ್ಟಾಗಿ ಕರೊನಾ ವೈರಸ್ ವಿರುದ್ಧ ಹೋರಾಟವಾದ ಜನತಾ ಕರ್ಫ್ಯೂವನ್ನು ಆಚರಿಸುತ್ತಿದ್ದಾರೆ.
ಇಂದು ಮುಂಜಾನೆ 7ರಿಂದ ಪ್ರಾರಂಭವಾಗಿರುವ ಜನತಾ ಕರ್ಫ್ಯೂ ರಾತ್ರಿ 9ಗಂಟೆಗೆ ಮುಗಿಯಲಿದೆ. ಆದರೆ ತಮಿಳುನಾಡು ರಾಜ್ಯ ಸರ್ಕಾರ ಈ ಅವಧಿಯನ್ನು ನಾಳೆಯವರೆಗೂ ವಿಸ್ತರಿಸಿಕೊಂಡಿದೆ. ಹೀಗಾಗಿ ತಮಿಳುನಾಡಿನಲ್ಲಿ ಜನತಾ ಕರ್ಫ್ಯೂ ಮಾ.23 (ಸೋಮವಾರ)ರ ಮುಂಜಾನೆ 5 ಗಂಟೆವರೆಗೂ ಜಾರಿಯಲ್ಲಿರಲಿದೆ.
ವ್ಯಾಪಾರಿಗಳು, ಉದ್ಯಮಿಗಳು ಸೇರಿ ಎಲ್ಲ ಕ್ಷೇತ್ರದ ಉದ್ಯೋಗಿಗಳು, ಜನಸಾಮಾನ್ಯರು ಈ ಜನತಾ ಕರ್ಫ್ಯೂಗೆ ಬೆಂಬಲ ನೀಡುತ್ತಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಜನರ ಹಿತದೃಷ್ಟಿಯಿಂದ ಈ ಜನತಾ ಕರ್ಫ್ಯೂ ಮುಂದುವರಿದರೆ ಒಳಿತು. ಹಾಗಾಗಿ ಸೋಮವಾರ ಮುಂಜಾನೆಯವರೆಗೂ ಜಾರಿಯಲ್ಲಿರಲಿದೆ. ಅಗತ್ಯ ಸೇವೆಗಳಿಗೆ ನಿರ್ಬಂಧವಿಲ್ಲ. ಸಾಮಾನ್ಯ ಜನರು ಸಹಕರಿಸಿ ಎಂದು ತಮಿಳುನಾಡು ಸರ್ಕಾರ ಹೇಳಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 8 =
Remember me
