ಕೊಯಮತ್ತೂರು:7ನೇ ತರಗತಿ ಓದುತ್ತಿರುವ ಬಾಲಕಿ ಕಳೆದ ಕೆಲ ದಿನಗಳಿಂದ ಹೊಟ್ಟೆ ನೋವು ಎನ್ನುತ್ತಿದ್ದಳು. ಪಾಲಕರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ಕರದೊಯ್ದಿದ್ದಾರೆ.
ಸ್ಕ್ಯಾನ್​ ಮಾಡಿದಾಗ ಹೊಟ್ಟೆಯಲ್ಲಿ ಗುಂಡನೆಯ ವಸ್ತು ಇರುವುದು ತಿಳಿದಿದೆ. ಅದನ್ನು ಎಂಡೋಸ್ಕೋಪಿ ಚಿಕಿತ್ಸೆ ಮೂಲಕ ತೆಗೆಯಲು ವೈದ್ಯರು ಮುಂದಾದರೂ, ಅದು ವಿಫಲವಾಯಿತು. ನಂತರ ಶಸ್ತ್ರಚಿಕಿತ್ಸೆ ಮೂಲಕ ಆ ವಸ್ತುವನ್ನು ಹೊರತೆಗೆಯಲು ನಿರ್ಧರಿಸಲಾಯಿತು.
ಸ್ಥಳಿಯ ಖಾಸಗಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ನಡೆಸಿ, ಆ 13 ವರ್ಷದ ಬಾಲಕಿಯ ಹೊಟ್ಟೆಯಿಂದ ತೆಗೆದದ್ದು ಬರೋಬ್ಬರಿ ಅರ್ಧ ಕೆಜಿಯಷ್ಟು ಕೂದಲು, ಪ್ಲಾಸ್ಟಿಕ್​ ಮತ್ತು ಶಾಂಪು ಪ್ಯಾಕೆಟ್​ಗಳನ್ನು.
ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರ ತಂಡದ ಮುಖ್ಯಸ್ಥ ಸರ್ಜನ್​ ಡಾ. ಗೋಕುಲ್​ ಕೃಪಾಶಂಕರ್​, ಬಾಲಕಿ ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾಳೆ. ಆದ್ದರಿಂದ ಆಕೆ ಪ್ಲಾಸ್ಟಿಕ್​, ಶಾಂಪು ಪಾಕೆಟ್​ ಮತ್ತು ಕೂದಲಿನಂತಹ ವಸ್ತುಗಳನ್ನು ತಿಂದಿದ್ದಾಳೆ. ಇದರಿಂದ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿತ್ತು ಎಂದು ಮಾಹಿತಿ ನೀಡಿದ್ದಾರೆ.
ಬಾಲಕಿಯ ಹತ್ತಿರ ಸಂಬಂಧಿಯೊಬ್ಬರು ಇತ್ತೀಚೆಗೆ ಮರಣ ಹೊಂದಿದ್ದರು. ಆ ಘಟನೆ ಈಕೆಯ ಮಾನಸಿಕ ಖಿನ್ನತೆಗೆ ಕಾರಣ. ಶಸ್ತ್ರಚಿಕಿತ್ಸೆ ನಂತರ ಆಕೆ ಪೂರ್ಣ ಗುಣಮುಖಳಾಗಿದ್ದಾಳೆ ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
