ಚೆನ್ನೈ:ಆನ್​ಲೈನ್ ಜೂಜು ಎನಿಸಿಕೊಂಡಿರುವ ಎಲ್ಲ ಗೇಮ್ಸ್​ಗಳನ್ನೂ ತಮಿಳುನಾಡು ಸರ್ಕಾರ ನಿಷೇಧಿಸಲು ಚಿಂತನೆ ನಡೆಸಿರುವುದಾಗಿ ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಕೊಯಮತ್ತೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಆನ್​ಲೈನ್ ರಮ್ಮಿ ಆಡಿ, ಆ ಜೂಜಿನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವುದು ಸರ್ಕಾರದ ಗಮನದಲ್ಲಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಕಾನೂನು ರಚಿಸಲಾಗುತ್ತಿದೆ. ಇದರ ಪ್ರಕಾರ, ಈ ಆಟದಲ್ಲಿ ಭಾಗಿಯಾಗುವವರನ್ನು ಅಪರಾಧಿಗಳೆಂದು ಪರಿಗಣಿಸಿ ಅವರಿಗೆ ಜೈಲು ಶಿಕ್ಷೆ ವಿಧಿಸುವುದಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು. ಈ ಆಟ ನಿಷೇಧಿಸಬೇಕು ಎಂದು ಸಾರ್ವಜನಿಕ ವಲಯದಿಂದ ಸಾಕಷ್ಟು ಮನವಿಗಳು ಬಂದಿವೆ. ಇದನ್ನು ಸರ್ಕಾರ ಪರಿಗಣಿಸಿದೆ ಎಂದು ಸಿಎಂ ಪಳನಿಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ಬೆಟ್ಟಿಂಗ್ ಜೂಜು- 2 ಲಕ್ಷ ರೂಪಾಯಿ, 2 ಮೊಬೈಲ್ ವಶಕ್ಕೆ; ಇಬ್ಬರ ಬಂಧನ
ಇಂಟರ್​ನೆಟ್ ಬಳಕೆ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಇದರ ಸಮರ್ಪಕ ಬಳಕೆಯ ಅರಿವಿಲ್ಲದೆ ವಿಶೇಷವಾಗಿ ಯುವಕರು ತಮ್ಮ ಬಾಳನ್ನು ಹಾಳುಮಾಡಿಕೊಳ್ಳತೊಡಗಿದ್ದಾರೆ. ಆನ್​ಲೈನ್ ರಮ್ಮಿ ಮುಂತಾದ ಗೇಮ್ಸ್ ಮನಸೆಳೆಯವಂತೆ ಇದ್ದು, ಅದು ಬದುಕನ್ನೇ ಹಾಳು ಮಾಡಿ ಆತ್ಮಹತ್ಯೆಗೆ ಕಾರಣವಾಗುತ್ತಿದೆ ಎಂದು ಪಳನಿಸ್ವಾಮಿ ಕಳವಳ ವ್ಯಕ್ತಪಡಿಸಿದರು. (ಏಜೆನ್ಸೀಸ್)
ಪುಲ್ವಾಮಾದಲ್ಲಿ ಎನ್​ಕೌಂಟರ್​ಗೆ ಒಬ್ಬ ಉಗ್ರ ಬಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
