ಹೈದರಾಬಾದ್​:ಅಂತಾರಾಜ್ಯ ವಾಹನ ಸಂಚಾರ ತಡೆಗಟ್ಟುವ ಜತೆಗೆ ಕೋವಿಡ್​ ಸೋಂಕು ಹರಡದಂತೆ ತಡೆಯಲು ಆಂಧ್ರ ಪ್ರದೇಶಕ್ಕೆ ಹೊಂದಿಕೊಂಡ ಗಡಿಯಲ್ಲಿ ತಮಿಳುನಾಡು ಸರ್ಕಾರ ಬೃಹತ್​ ಗೋಡೆಯನ್ನು ನಿರ್ಮಿಸಿದೆ. ಇದರಿಂದಾಗಿ ಈ ಭಾಗದಲ್ಲಿನ ಜನ-ವಾಹನ ಸಂಚಾರಕ್ಕೆ ಭಾರಿ ಅಡಚಣೆ ಉಂಟಾಗಿದೆ.
ಚಿತ್ತೂರು ಜಿಲ್ಲೆಯ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗುಡಿಯಟ್ಟಾಂನಲ್ಲಿ ತಮಿಳುನಾಡು ಸರ್ಕಾರ 3 ಅಡಿ ಎತ್ತರ, 4 ಅಡಿ ಅಗಲ ಮತ್ತು 30 ಅಡಿ ಉದ್ದದ ಗೋಡೆಯನ್ನು ನಿರ್ಮಿಸಿದೆ. ಅಂತಾರಾಜ್ಯ ತುರ್ತು ಸರಕು ಸಾಗಣೆ ವಿಷಯವಾಗಿ ಭಾರಿ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ವೆಲ್ಲೋರ್​ ಜಿಲ್ಲಾಡಳಿತದ ಗಮನಸೆಳೆಯುವ ಸಲುವಾಗಿ ತಮಿಳುನಾಡು ಸರ್ಕಾರ ಈ ಕ್ರಮ ಕೈಗೊಂಡಿದೆ.
ಚಿತ್ತೂರು ಗಡಿಗೆ ಹೊಂದಿಕೊಂಡಂತಿರುವ ತಮಿಳುನಾಡಿನ ವೆಲ್ಲೋರ್​ ನಗರ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಈ ಭಾಗದಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಉಭಯ ಸರ್ಕಾರಗಳು ಚೆಕ್​ಪೋಸ್ಟ್​ಗಳನ್ನು ನಿರ್ಮಿಸಿವೆ. ಹೀಗಿರುವಾಗ ಈ ಭಾಗದಲ್ಲಿ ತಮಿಳುನಾಡು ಗೋಡೆ ನಿರ್ಮಿಸಿರುವ ಕ್ರಮ ಅಚ್ಚರಿ ಮತ್ತು ಆಘಾತವನ್ನುಂಟು ಮಾಡಿದೆ ಎಂದು ಚಿತ್ತೂರು ಜಿಲ್ಲೆಯ ಜಂಟಿ ಕಲೆಕ್ಟರ್​ ಡಿ. ಮಾರ್ಕೆಂಡೇಯಲು ಹೇಳಿದ್ದಾರೆ.
ವೆಲ್ಲೋರ್​ನಲ್ಲಿರುವ ಕ್ಯಾನ್ಸರ್​ ಆಸ್ಪತ್ರೆಗೆ ಆಂಧ್ರಪ್ರದೇಶದ ಸಾಕಷ್ಟು ಜನರು ಚಿಕಿತ್ಸೆ ತೆರಳುತ್ತಾರೆ. ಅಲ್ಲದೆ ಅಲ್ಲಿರುವ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಂಧ್ರದ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಆದ್ದರಿಂದ, ಗೋಡೆಯನ್ನು ಶೀಘ್ರವೇ ತೆರವುಗೊಳಿಸುವಂತೆ ತಮಿಳುನಾಡು ಸರ್ಕಾರದ ಮನವೊಲಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.
ಚೀನಾದ ಕಳಪೆ ಟೆಸ್ಟ್​ ಕಿಟ್​ನಿಂದ ಭಾರತಕ್ಕೆ ಯಾವುದೇ ನಷ್ಟವಾಗಿಲ್ಲ: ಕೇಂದ್ರ ಸರ್ಕಾರದ ಸ್ಪಷ್ಟನೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × one =
Remember me
