ತಮಿಳುನಾಡು:ಆಸ್ಪತ್ರೆಯಲ್ಲಿ ಮಹಿಳಾ ಭದ್ರತಾ ಸಿಬ್ಬಂದಿಯೊಬ್ಬರು ಕುಡಿದ ವ್ಯಕ್ತಿಯನ್ನು ನಿರ್ಬಂಧಿತ ಕೊಠಡಿಗೆ ಪ್ರವೇಶಿಸದಂತೆ ತಡೆದದ್ದಕ್ಕೆ ಆತ ಮಹಿಳೆಯ ಕುತ್ತಿಗೆ ಹಿಡಿದು, ಎಳೆದಾಡಿದ ಘಟನೆ ತಮಿಳುನಾಡಿನ ತೂತುಕುಡಿ ತಮಿಳಿನ ಆಸ್ಪತ್ರೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜಕಾರಣದ ಕುಸ್ತಿ- ಸಚಿವ ಮತ್ತು ಪಾಲಿಕೆ ಬಿಜೆಪಿ ಸದಸ್ಯರ ನಡುವೆ ಜಟಾಪಟಿ
ಕೋವಿಲ್‌ಪಟ್ಟಿಯಲ್ಲಿರುವ ಸರ್ಕಾರಿ ಆಸ್ಪತ್ರೆಯ ನವಜಾತ ಶಿಶುಗಳ ವಾರ್ಡ್‌ ಎದುರು ಈ ಘಟನೆ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ 24 ವರ್ಷದ ಯುವಕನೊಬ್ಬ ಕೊಠಡಿಗೆ ತೆರಳಲು ಯತ್ನಿಸಿದಾಗ ಮಹಿಳಾ ಸಿಬ್ಬಂದಿ ಆತನಿಗೆ ಪ್ರವೇಶಿಸಲು ಅನುಮತಿ ನೀಡಿಲ್ಲ. ಇದಕ್ಕೆ ಕೆಂಡಾಮಂಡಲಗೊಂಡ ಕುಡುಕ, ಮಹಿಳೆಯ ಕತ್ತನ್ನು ಹಿಸುಕಿ, ಎಳೆದಾಡಿದ ದೃಶ್ಯ ಆಸ್ಪತ್ರೆಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಘಟನೆಯ ವಿವರ:ಕಾಳಿರಾಜ್ ಎಂದು ಗುರುತಿಸಲಾದ ಆರೋಪಿಯು ಮಹಿಳಾ ಭದ್ರತಾ ಸಿಬ್ಬಂದಿಗೆ ಹೊಡೆದು, ಆಕೆಯ ಕುತ್ತಿಗೆಯನ್ನು ಹಿಡಿದು ಥಳಿಸಿದ್ದಾನೆ. ಸ್ಥಳದಿಂದ ಪರಾರಿಯಾಗುವ ಮುನ್ನ ಆಕೆಯ ಕೈಗಳನ್ನು ತಿರುಚುವುದು ಕೂಡ ದೃಶ್ಯದಲ್ಲಿ ಸೆರೆಯಾಗಿದೆ. ರಾತ್ರಿ ನವಜಾತ ಶಿಶುಗಳ ವಾರ್ಡ್‌ಗೆ ಪ್ರವೇಶಿಸಲು ಯತ್ನಿಸುತ್ತಿದ್ದ ಕಾಳಿರಾಜ್​ನನ್ನು ಭದ್ರತಾ ಸಿಬ್ಬಂದಿ ಪದ್ಮಾಮತಿ ತಡೆಯಲು ಯತ್ನಿಸಿದರು. ಈ ವೇಳೆ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಇದನ್ನೂ ಓದಿ:ಕುಮಾರವಿಜಯ ಸಮರವ್ಯೂಹ! ಬೆಳಗಾವಿ ಅಧಿವೇಶನಕ್ಕೆ ಬಿಜೆಪಿ-ಜೆಡಿಎಸ್​ನಿಂದ ಜಂಟಿ ಕಾರ್ಯತಂತ್ರ
ಘಟನೆ ತೀವ್ರವಾದ ಬೆನ್ನಲ್ಲೇ ಕುಡುಕ ಸ್ಥಳದಿಂದ ಪರಾರಿಯಾಗಿದ್ದನು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಎಫ್‌ಐಆರ್‌ ದಾಖಲಿಸಿಕೊಂಡು, ಕಾಳಿರಾಜ್‌ನನ್ನು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ,(ಏಜೆನ್ಸೀಸ್).
BBKS10: ಏಳನೇ ವಾರಕ್ಕೆ ಮನೆಯಿಂದ ಹೊರಬಂದ ಸ್ಪರ್ಧಿ ನೀತು ವನಜಾಕ್ಷಿ​!; ಹಂಚಿಕೊಂಡ ವಿಷಯಗಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
