ಚೆನ್ನೈ:ಕಳೆದ ಕೆಲವು ದಿನಗಳಿಂದ ತಮಿಳುನಾಡು ರಾಜ್ಯದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆಯು ನವೆಂಬರ್ 11 ರವರೆಗೆ ಅಂದರೆ ಮುಂದಿನ ಮೂರು ದಿನಗಳವರೆಗೆ ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ತಮಿಳುನಾಡು ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ರಾಜಧಾನಿ ಚೆನ್ನೈ ಹೆಚ್ಚು ಹಾನಿಗೊಳಗಾಗಿದೆ. ನವೆಂಬರ್ 11 ರವರೆಗೆ ಮೀನುಗಾರರು ಸಮುದ್ರಕ್ಕೆ ಹೋಗದಂತೆ ಸೂಚಿಸಲಾಗಿದೆ ಮತ್ತು ಆಳ ಸಮುದ್ರದಲ್ಲಿರುವವರು ತಕ್ಷಣ ಕರಾವಳಿಗೆ ಮರಳಲು ಸೂಚಿಸಲಾಗಿದೆ.
ಮಳೆ ಸಂಬಂಧಿತ ಅನಾಹುತದಲ್ಲಿ ಈವರೆಗೆ ಐವರು ಸಾವಿಗೀಡಾಗಿದ್ದಾರೆ. ಚೆನ್ನೈ, ಕಾಂಚೀಪುರಂ, ಚೆಂಗಲ್‌ಪಟ್ಟು, ತಿರುವಳ್ಳೂರು, ತಂಜಾವೂರು, ತಿರುವರೂರು, ನಾಗಪಟ್ಟಿಣಂ, ಮೈಲಾಡುತುರೈ, ಕಡಲೂರು ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ (ನವೆಂಬರ್ 10,11) ರಜೆ ಘೋಷಣೆ ಮಾಡಲಾಗಿದೆ.
ಪುದುಕೊಟ್ಟೈ, ಶಿವಗಂಗೈ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದರೆ, ತಿರುಚ್ಚಿ ಜಿಲ್ಲಾಡಳಿತ ಬುಧವಾರ ಶಾಲೆಗೆ ಮಾತ್ರ ರಜೆ ಘೋಷಿಸಿದೆ. ಮಳೆಯ ಪ್ರಮಾಣ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.
VIDEO: ಅಫ್ಘಾನ್‌ ತಾಲಿಬಾನಿಗಳ ವಶವಾದಾಗ ಅಸಂಖ್ಯ ಜನರಿಗೆ ಕಣ್ಣೀರು ತರಿಸಿದ್ದ ಮುದ್ದುಕಂದ ನಾಪತ್ತೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 2 =
Remember me
