ಈರೋಡ್​ (ತಮಿಳುನಾಡು):ಬೆಳ್ಳಂಬೆಳಗ್ಗೆ ಈರೋಡ್​ನ ಕಾವೇರಿಪಟ್ಟಣಂ ಬಳಿ ಕಾರು ಮತ್ತು ಸರ್ಕಾರಿ ಬಸ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ.
ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು ಸರ್ಕಾರಿ ಬಸ್​ಗೆ ಹಿಂಬದಿಯಿಂದ ಬಂದು ಓಮ್ನಿ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ. ಬೆಳಗ್ಗೆ 4 ಗಂಟೆಯಲ್ಲಿ ಅಪಘಾತ ನಡೆದಿರುವುದಾಗಿ ವರದಿಯಾಗಿದೆ. ಈರೋಡ್ ಜಿಲ್ಲೆಯ ಭವಾನಿಯಿಂದ ಸ್ನೇಹಿತರು ಬೆಂಗಳೂರಿನ ಒಂಡರ್ಲಾಗೆ ಹೊರಟಿದ್ದರು.
ಇದನ್ನೂ ಓದಿರಿ:24 ವರ್ಷದ ಹಿಂದೆ ಮಾಡಿದ್ದ ತಪ್ಪಿಗಾಗಿ ಸರ್ಕಾರಿ ಕೆಲಸ ಕಳೆದುಕೊಂಡ ಮಹಿಳೆ..!
ಪ್ಯಾಸೆಂಜರ್ ಇಳಿಸಲು ನಿಲ್ಲಿಸಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಬಸ್ಸಿನಿಂದ ಇಳಿಯುತ್ತಿದ್ದ ಓರ್ವ ಪ್ರಯಾಣಿಕ ಹಾಗೂ ಓಮ್ನಿಯಲ್ಲಿದ್ದ ನಾಲ್ಕು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್ ಹಾಗೂ ಬಸ್ ಪ್ಯಾಸೆಂಜರ್ ದೇವರಾಜು ಮೃತ ದುರ್ದೈವಿಗಳು.
ಓಮ್ನಿಯಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಾವೇರಿಪಟ್ಟಣಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಪಾಲಕರಿಗೆ ಸುಳ್ಳು ಹೇಳಿ ಲಾಡ್ಜ್​ ಸೇರಿದ್ದ ಸರ್ಕಾರಿ ನೌಕರರಿಬ್ಬರ ಸ್ಥಿತಿ ನೋಡಿ ಬೆಚ್ಚಿಬಿದ್ದ ಪೊಲೀಸರು!

ಬುರ್ಜ್ ಖಲೀಫಾ ಮೇಲೆ ಮೂಡಿದ ವಿಕ್ರಾಂತ್ ರೋಣ!

ಬಿಜೆಪಿಗರು ಏಳುವುದು ಯಾವಾಗ?!; ಚಕ್ರವರ್ತಿ ಸೂಲಿಬೆಲೆ ಅಂಕಣ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − twelve =
Remember me
